ನವದೆಹಲಿ: ಎಲ್ಲಾ ವದಂತಿಗಳನ್ನು ಅಲ್ಲಗೆಳೆದಿರುವ ಕೇಂದ್ರ ಸರ್ಕಾರ, 2 ಸಾವಿರದ ನೋಟುಗಳನ್ನು ನಿಷೇಧಿಸುವ ಯಾವ ಚಿಂತನೆಯೂ ಸರ್ಕಾರದ ಮುಂದಿಲ್ಲ ಎಂದು ಸ್ಪಷ್ಟಪಡಿಸಿದೆ.
ಈ ಬಗ್ಗೆ ಲೋಕಸಭೆಯಲ್ಲಿ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಕಿರಣ್ ರಿಜ್ಜು, ‘ನಾವು ನಕಲಿ ನೋಟುಗಳನ್ನು ಮಾತ್ರ ವಶಪಡಿಸಿಕೊಳ್ಳುತ್ತಿದ್ದೇವೆ. 2 ಸಾವಿರ ನೋಟು ನಿಷೇಧದ ಬಗೆಗಿನ ವದಂತಿ ಸತ್ಯಕ್ಕೆ ದೂರವಾದುದು’ ಎಂದಿದ್ದಾರೆ.
‘ಗುಜರಾತ್ ಮತ್ತು ಪಶ್ಚಿಮಬಂಗಾಳಗಳಲ್ಲಿ ಅತ್ಯಧಿಕ ಪ್ರಮಾಣದ ನಕಲಿ ನೋಟುಗಳನ್ನು ನಾವು ವಶಪಡಿಸಿಕೊಳ್ಳುತ್ತಿದ್ದೇವೆ. ನಕಲಿ ನೋಟುಗಳನ್ನು ಗುರುತಿಸಲು ಸಾಧ್ಯವಾಗುವುದಿಲ್ಲ ಎಂಬುದು ಸುಳ್ಳು’ ಎಂದು ಹೇಳಿದ್ದಾರೆ.
ಅಲ್ಲದೇ ಹೊಸ ಕರೆನ್ಸಿ ನೋಟುಗಳಲ್ಲಿ ಶುದ್ಧ ದೇಶೀ ವಿನ್ಯಾಸಗಳು ಮತ್ತು ಹೆಚ್ಚುವರಿ ಫೀಚರ್ಗಳು ಇರುವುದರಿಂದ ಅದನ್ನು ಯಾರೂ ಶೇ.100ರಷ್ಟು ನಕಲಿ ಮಾಡಲು ಸಾಧ್ಯವಾಗುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಸರ್ಕಾರ ಅಲರ್ಟ್ ಆಗಿದ್ದು, ನಕಲಿ ನೋಟುಗಳನ್ನು ತಡೆಯುವ ಎಲ್ಲಾ ಕ್ರಮಗಳನ್ನೂ ಕೈಗೊಂಡಿದೆ ಎಂದು ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.