ನವದೆಹಲಿ: ಚುನಾವಣೆ ಸಂದರ್ಭದಲ್ಲಿ ನೀಡುವ ಭರವಸೆಗಳು ಈಡೇರದೆ ಹಾಗೆಯೇ ಉಳಿಯುತ್ತಿವೆ, ಇದಕ್ಕೆ ರಾಜಕೀಯ ಪಕ್ಷಗಳನ್ನೇ ಹೊಣೆ ಮಾಡಬೇಕು ಎಂದು ಭಾರತದ ಮುಖ್ಯನ್ಯಾಯಮೂರ್ತಿ ಜೆ.ಎಸ್ ಖೇಹರ್ ಹೇಳಿದ್ದಾರೆ.
ರಾಜಕೀಯ ಪಕ್ಷಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಅವರು, ಪಕ್ಷಗಳ ಚುನಾವಣಾ ಪ್ರಣಾಳಿಕೆಗೂ ಆರ್ಥಿಕ ಸುಧಾರಣೆ ಮತ್ತು ಸಮಾಜಿಕ ನ್ಯಾಯದ ಬಗೆಗಿನ ಸಂವಿಧಾನದ ಗುರಿಗೂ ಯಾವುದೇ ಸಂಬಂಧವೇ ಇರುವುದಿಲ್ಲ ಎಂದಿದ್ದಾರೆ.
‘ಎಕನಾಮಿಕ್ ರಿಫಾರ್ಮ್ಸ್ ವಿದ್ ರೆಫರೆನ್ಸ್ ಟು ಎಲೆಕ್ಟೋರಲ್ ಇಶ್ಯುಸ್’ ಬಗೆಗಿನ ವಿಚಾರಗೋಷ್ಟಿಯನ್ನು ಉದ್ದೇಶಿಸಿ ಅವರು ಶನಿವಾರ ಮಾತನಾಡಿದರು.
ಚುನಾವಣೆಯ ಭರವಸೆಗಳನ್ನು ಈಡೇರಿಸದೇ ಇರುವುದಕ್ಕೆ ಹತ್ತು ಹಲವು ಕಾರಣಗಳನ್ನು ರಾಜಕೀಯ ಪಕ್ಷಗಳು ನೀಡುತ್ತವೆ ಎಂದು ಟೀಕಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.