ರಾಯಚೂರು: ಮಾಧ್ಯಮಗಳ ಮೇಲೆ ನಿಯಂತ್ರಣ ಹೇರಲು ಹೊರಟಿರುವ ರಾಜ್ಯ ಸರ್ಕಾರದ ಕ್ರಮ ಸಮಂಜಸವಲ್ಲ ಎಂದು ನಾಡೋಜ ಡಾ.ಪಾಟೀಲ್ ಪುಟ್ಟಪ್ಪ ಅಭಿಪ್ರಾಯ ಪಟ್ಟರು.
ಅವರು ನಗರದ ಕೃಷಿ ವಿಶ್ವವಿದ್ಯಾಲಯದ ಅತಿಥಿ ಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮಾಧ್ಯಮಗಳಿಗೆ ಸ್ವ-ನಿಯಂತ್ರಣ ಬೇಕೇ ಹೊರತು ಸರ್ಕಾರ ನಿಯಂತ್ರಿಸಲು ಸದನ ಸಮಿತಿ ರಚಿಸಿರುವುದು ಸರಿಯಲ್ಲ, ಸರ್ಕಾರ ಈ ನಿರ್ಧಾರ ಮೂರ್ಖತನದ ಪರಮಾವಧಿ, ಮಾಧ್ಯಮಗಳಿಗೆ ಸ್ವಾತಂತ್ರ್ಯ ನೀಡಬೇಕೆಂದರು.
ಈ ಭಾಗದ ಬೆಳವಣಿಗೆಯ ಅವಕಾಶಗಳು ಕೂಡಿ ಬಂದಿದ್ದ, ರಾಯಚೂರು ಜಿಲ್ಲೆಗೆ ವಿಶ್ವವಿದ್ಯಾಲಯ ಸ್ಥಾಪನೆಯಾಗುತ್ತಿರುವುದು ಹೆಮ್ಮೆಯ ವಿಚಾರ. ಮುಂದಿನ ದಿನಗಳಲ್ಲಿ ಈ ಭಾಗ ಶೈಕ್ಷಣಿಕ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದರು.
ಕುಲಸಚಿವ ಡಾ.ಟಿ.ಎನ್.ಸಾಲಿಮಠ, ಶ್ರೀಶೈಲ್, ಸಿದ್ದಪ್ಪ ಭಂಡಾರಿ, ಕೃಷಿ ವಿವಿ ವಿಸ್ತರಣಾ ಅಧಿಕಾರಿ ಮೇಟಿ ಹಾಗೂ ಇತರರು ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.