ಭೋಪಾಲ್: ಶೀಘ್ರದಲ್ಲೇ ಮಧ್ಯಪ್ರದೇಶ ಸಂಪೂರ್ಣ ಮದ್ಯಮುಕ್ತ ರಾಜ್ಯವಾಗಿ ಹೊರಹೊಮ್ಮಲಿದೆ. ಅಲ್ಲಿನ ಎಲ್ಲಾ ಮದ್ಯದಂಗಡಿಗಳನ್ನು ಹಂತ ಹಂತವಾಗಿ ಮುಚ್ಚುವಂತೆ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ ಆದೇಶಿಸಿದ್ದಾರೆ.
ಮೊದಲ ಹಂತವಾಗಿ ಸುಪ್ರೀಂಕೋರ್ಟ್ ಆದೇಶದಂತೆ ಹೆದ್ದಾರಿಯ 500 ಮೀಟರ್ವರೆಗಿನ ಮದ್ಯದಂಗಡಿಗಳನ್ನು ಬಂದ್ ಮಾಡಲಾಗಿದೆ.
ಮುಂದಿನ ಹಂತದಲ್ಲಿ ಮದ್ಯದಂಗಡಿಗಳನ್ನು ವಾಸಸ್ಥಳಗಳಲ್ಲಿ, ಶಿಕ್ಷಣ ಸಂಸ್ಥೆಗಳ ಬಳಿ, ಧಾರ್ಮಿಕ ಸ್ಥಳಗಳ ಬಳಿ ತೆರೆಯಲು ಅನುಮತಿ ನೀಡುವುದಿಲ್ಲ.
ಅಲ್ಲದೇ ಮದ್ಯ ವ್ಯಸನಿಗಳನ್ನು ವ್ಯಸನಮುಕ್ತಗೊಳಿಸುವ ಅಭಿಯಾನವನ್ನು ಹಮ್ಮಿಕೊಳ್ಳುವುದಾಗಿ ಚೌವ್ಹಾಣ್ ಹೇಳಿದ್ದಾರೆ.
ಇತ್ತೀಚಿಗಷ್ಟೇ ಮದ್ಯದಂಗಡಿಗಳ ವಿರುದ್ಧ ಮಧ್ಯಪ್ರದೇಶದಲ್ಲಿ ಭಾರೀ ಪ್ರತಿಭಟನೆಗಳಾಗಿದ್ದು, ಬೆಂಕಿಯನ್ನೂ ಹಚ್ಚಲಾಗಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.