ಹುಬ್ಬಳ್ಳಿ: ಕೇಂದ್ರ ಯುವಜನ ಹಾಗೂ ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಹುಬ್ಬಳ್ಳಿಯ ಎನ್ಎಸ್ಎಸ್ ಘಟಕದ ಸಹಯೋಗದಲ್ಲಿ ರಾಷ್ಟ್ರೀಯ ಯುವ ನೇತಾರ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿತ್ತು.
ನಾಯಕನಾದವನು ಸಮಾಜಮುಖಿಯಾಗಿರಬೇಕು. ಪಠ್ಯೇತರ ಚಟುವಟಿಕೆಗಳಲ್ಲೂ ಭಾಗವಹಿಸುವುದರಿಂದ ಭವಿಷ್ಯ ಉಜ್ವಲವಾಗುತ್ತದೆ ಎಂದು ಕಾರ್ಯಕ್ರಮದ ಮುಖ್ಯ ಅತಿಥಿ, ಎನ್ಎಸ್ಎಸ್ ಬೆಂಗಳೂರಿನ ಪ್ರಾದೇಶಿಕ ನಿರ್ದೇಶಕ ಅರುಣ ಪೂಜಾರ ಹೇಳಿದರು.
ಇನ್ನೋರ್ವ ಅತಿಥಿ ಕಾನೂನು ವಿವಿಯ ಪ್ರಭಾರಿ ಕುಲಸಚಿವ (ಮೌಲ್ಯಮಾಪನ) ಡಾ.ಜಿ.ಬಿ.ಪಾಟೀಲ್ ಮಾತನಾಡಿ, ನಾಯಕತ್ವದ ಮಹತ್ವ ಹಾಗೂ ನಾಯಕತ್ವದ ಮೂಲಕ ಸಮಾಜ ಸೇವೆ ಮಾಡಲು ಇರುವ ಅವಕಾಶ ಕುರಿತು ವಿದ್ಯಾರ್ಥಿಗಳಿಗೆ ಹೇಳಿದರು.
ಸಾಮಾಜಿಕ ಜವಾಬ್ದಾರಿ ಕುರಿತು ತಿಳಿ ಹೇಳಿದ ಡಾ. ರತ್ನಾ ಭರಮಗೌಡರ್, ಸಮಾಜ ಕಲ್ಯಾಣದ ಆಧಾರದ ಮೇಲೆ ವೈಯಕ್ತಿಕ ಬೆಳವಣಿಗೆ ನೆಲೆನಿಂತಿರುತ್ತದೆ ಎಂದರು. ಪಠ್ಯದ ಜೊತೆ ಜೊತೆಗೆ, ಪಠ್ಯೇತರ ಚಟುವಟಿಕೆಗಳಲ್ಲೂ ಭಾಗವಹಿಸುವ ಮೂಲಕ ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಸಹಕಾರಿಯಾಗಬೇಕು ಎಂದು ಆಶಿಸಿದರು.
ತುಮಕೂರಿನ ವಿದ್ಯೋದಯ ಕಾನೂನು ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಬಹುಮಾನ ಗಿಟ್ಟಿಸಿದರು. ಬೆಳಗಾವಿಯ ಆರ್.ಎಲ್.ಲಾ ಕಾಲೇಜಿನ ವಿದ್ಯಾರ್ಥಿಗಳು ಪ್ರಶಸ್ತಿಗೆ ಭಾಜನರಾದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.