ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಪದವಿ ಬಗ್ಗೆ ಅವಹೇಳನಕಾರಿಯಾಗಿ ಟ್ವಿಟ್ ಮಾಡಿದ್ದ ಅರವಿಂದ್ ಕೇಜ್ರಿವಾಲ್ ಅವರ ವಿರುದ್ಧ ಇದೀಗ ಅಸ್ಸಾಂ ನ್ಯಾಯಾಲಯ ಜಾಮೀನು ಸಹಿತ ಅರೆಸ್ಟ ವಾರೆಂಟ್ ಜಾರಿಗೊಳಿಸಿದೆ.
ಪ್ರಧಾನಿ ವಿರುದ್ಧದ ಮಾನನಷ್ಟ ಮೊಕದ್ದಮೆಯ ವಿಚಾರಣೆಗೆ ಸೋಮವಾರ ಕೇಜ್ರಿವಾಲ್ ಅವರು ಹಾಜರಾಗದೇ ಇದ್ದ ಕಾರಣ ಅವರ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿ ಮಾಡಲಾಗಿದೆ.
ದೆಹಲಿಯಲ್ಲಿ ಸ್ಥಳೀಯ ಚುನಾವಣೆ ಇರುವ ಹಿನ್ನಲೆಯಲ್ಲಿ ಹಾಗೂ ಸಿಎಂ ಆಗಿ ಸಾಕಷ್ಟು ಕಾರ್ಯ ಇರುವ ಹಿನ್ನಲೆಯಲ್ಲಿ ಕೇಜ್ರಿವಾಲ್ ದೆಹಲಿ ಬಿಟ್ಟು ಹೊರ ಬರಲಾಗುತ್ತಿಲ್ಲ ಎಂದು ಅವರ ವಕೀಲ ನೀಡಿದ ಕಾರಣಗಳನ್ನು ಕೋರ್ಟ್ ತಿರಸ್ಕರಿಸಿದೆ.
ಡಿ.15ರಂದು ಟ್ವಿಟ್ ಮಾಡಿದ್ದ ಕೇಜ್ರಿವಾಲ್, ‘ಮೋದಿಯವರು 12ನೇ ತರಗತಿ ಪಾಸು, ಅದರ ಬಳಿಕದ ಪದವಿ ಬರಿ ನಕಲು’ ಎಂದಿದ್ದರು.
ಇದರ ವಿರುದ್ಧ ಬಿಜೆಪಿ ನಾಯಕ ಸುರ್ಜೈ ರಂಘೋಫರ್ ಎಂಬುವವರು ಮಾನನಷ್ಟ ಮೊಕದ್ದಮೆ ಹೂಡಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.