ಬೆಂಗಳೂರು: ಗದಗ ಜಿಲ್ಲೆಯಲ್ಲಿರುವ ಕಪ್ಪತ್ತಗುಡ್ಡವನ್ನು ಸಂರಕ್ಷಿತ ಅರಣ್ಯ ಪ್ರದೇಶವೆಂದು ಘೋಷಿಸಲು ತಾವು ಈಗಾಗಲೇ ಒಪ್ಪಿಗೆ ನೀಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ವನ್ಯಜೀವಿ ಮಂಡಳಿಯ ಮುಂಬರುವ ಸಭೆಯಲ್ಲಿ ಅಂತಿಮ ತೀರ್ಮಾನ ಹೊರಬೀಳುವುದು ಎಂದು ತಿಳಿಸಿದ್ದಾರೆ.
ನವೆಂಬರ್ನಲ್ಲಿ ಕಪ್ಪತ್ತಗುಡ್ಡದ ಸಂರಕ್ಷಿತ ಅರಣ್ಯ ಪ್ರದೇಶ ಸ್ಥಾನಮಾನವನ್ನು ಹಿಂಪಡೆಯಲು ಸರ್ಕಾರ ನಿರ್ಧರಿಸಿತ್ತು. ಆದರೆ ಇದಕ್ಕೆ ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು.
ಕಪ್ಪತ್ತಗುಡ್ಡದಲ್ಲಿ ಅಮೂಲ್ಯ ಔಷಧಿ ಸಸ್ಯಗಳು ಉಳಿಯಬೇಕಿದೆ. ಅವು ಉಳಿಯಬೇಕಾದಲ್ಲಿ ಕಪ್ಪತ್ತಗುಡ್ಡ ಉಳಿಯಬೇಕೆಂದು ಗದಗ ಸೇರಿದಂತೆ ರಾಜ್ಯಾದ್ಯಂತ ವಿವಿಧ ಸಂಘಟನೆಗಳು, ಸಾಮಾಜಿಕ ಕಾರ್ಯಕರ್ತರು ಹಾಗೂ ನಾಗರಿಕರು ತೀವ್ರ ಹೋರಾಟ ಮಾಡಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.