ಮುಂಬಯಿ: ಪ್ರತಿಯೊಬ್ಬ ಮಹಿಳೆಗೂ ನ್ಯಾಯ ನೀಡುವ ದೃಷ್ಟಿಯಿಂದ ಕೇಂದ್ರ ಸರ್ಕಾರ ತ್ರಿವಳಿ ತಲಾಖ್ಗೆ ಸಂಬಂಧಿಸಿದಂತೆ ಸ್ಪಷ್ಟ ನಿಲುವು ಹೊಂದಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಯಾವುದೇ ಜಾತಿ, ಮತ ಧರ್ಮದ ಬೇಧವಿಲ್ಲದೇ ಎಲ್ಲ ಮಹಿಳೆಯರಿಗೂ ಸಮಾನತೆಯಿಂದ ಬದುಕುವ ಹಕ್ಕಿರಬೇಕು. ಈ ನಿಟ್ಟಿನಲ್ಲಿ ತ್ರಿವಳಿ ತಲಾಖ್ ವಿಷಯದಲ್ಲಿ ಸರ್ಕಾರಕ್ಕೆ ಯಾವುದೇ ರೀತಿಯ ಗೊಂದಲಗಳಿಲ್ಲ. ಅದು ನಿಷೇಧವಾಗಬೇಕು ಅಷ್ಟೇ ಎಂದು ಅವರು ಹೇಳಿದ್ದಾರೆ.
ತ್ರಿವಳಿ ತಲಾಖ್ ಕುರಿತು ಖುರಾನ್ನಲ್ಲೂ ಯಾವುದೇ ಪ್ರಸ್ತಾಪವಿಲ್ಲ ಎಂದು ಕೇಳಿರುವೆ. ಧರ್ಮಗ್ರಂಥದಲ್ಲೂ ಈ ಕುರಿತು ವಿಚಾರವಿಲ್ಲದಿದ್ದಾಗ ಅದನ್ನು ಮುಂದುವರೆಸುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದಿದ್ದಾರೆ.
ಇದಕ್ಕೆ ಸಂಬಂಧಿಸಿದಂತೆಯೇ ಹೇಳಿಕೆ ನೀಡಿರುವ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ, ಈ ವಿಷಯದಲ್ಲಿ ಸರ್ಕಾರದ ಮಧ್ಯಸ್ಥಿಕೆ ಅವಶ್ಯಕತೆ ಇಲ್ಲ ಎಂದಿದೆ. ಅಲ್ಲದೇ ಇನ್ನು ಒಂದೂವರೆ ವರ್ಷದಲ್ಲಿ ಈ ಪದ್ಧತಿಗೆ ಕೊನೆ ಹಾಡುವುದಾಗಿ ಮಂಡಳಿ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.