ಭುವನೇಶ್ವರ: ತ್ರಿವಳಿ ತಲಾಖ್ ವಿಷಯವನ್ನು ಪ್ರಸ್ತಾಪಿಸಿರುವ ಪ್ರಧಾನಿ ನರೇಂದ್ರ ಮೋದಿ, ಮುಸ್ಲಿಂ ಮಹಿಳೆಯರಿಗೆ ನ್ಯಾಯ ಒದಗಿಸುವ ಅಗತ್ಯವಿದೆ ಎಂದು ಪ್ರತಿಪಾದಿಸಿದ್ದಾರೆ.
ಭುವನೇಶ್ವರದಲ್ಲಿ ಮಾತನಾಡಿದ ಅವರು, ನಮ್ಮ ಸಮಾಜದಲ್ಲಿ ಬಹಳಷ್ಟು ಸಾಮಾಜಿಕ ಪಿಡುಗುಗಳಿದ್ದು, ನಾವೆಲ್ಲರೂ ಎಚ್ಚೆತ್ತು, ಸಂತ್ರಸ್ಥರಿಗೆ ನ್ಯಾಯ ಒದಗಿಸುವ ಕಾರ್ಯವನ್ನು ಮಾಡಬೇಕಾಗಿದೆ ಎಂದರು.
ಹಿಂದುಳಿದ ವರ್ಗಗಳ ಆಯೋಗಕ್ಕೆ ತಮ್ಮ ಸರ್ಕಾರ ಸಾಂವಿಧಾನಿಕ ಮಾನ್ಯತೆಯನ್ನು ನೀಡಿರುವುದನ್ನು ಪ್ರಸ್ತಾಪಿಸಿದ ಅವರು, ಇದರ ಲಾಭವನ್ನು ಮುಸ್ಲಿಂ ಮಹಿಳೆಯರು ಪಡೆದುಕೊಳ್ಳಬಹುದು ಎಂದರು. ಅಲ್ಲದೇ ಹಿಂದುಳಿತ ವರ್ಗಗಳನ್ನು ತಲುಪಿ ಅವುಗಳ ಶ್ರೇಯಸ್ಸಿಗೆ ಶ್ರಮಿಸಬೇಕು ಎಂದು ಬಿಜೆಪಿಗರಿಗೆ ಕರೆ ನೀಡಿದರು.
’ಮುಸ್ಲಿಂ ಮಹಿಳೆಯರಿಗೆ ನ್ಯಾಯ ಸಿಗಬೇಕಿದೆ, ಯಾರನ್ನೂ ದೌರ್ಜನ್ಯಕ್ಕೀಡು ಮಾಡಬಾರದು. ತ್ರಿವಳಿ ತಲಾಖ್ ವಿಷಯದಲ್ಲಿ ಮುಸ್ಲಿಂ ಸಮುದಾಯದೊಳಗೆಯೇ ಭಿನ್ನಾಭಿಪ್ರಾಯವಿದೆ. ಸಾಮಾಝಿಕ ಪಿಡುಗಗಳ ವಿರುದ್ಧ ಹೋರಾಡಬೇಕು. ಮುಸ್ಲಿಂ ಮಹಿಳೆಯರಿಗೆ ನ್ಯಾಯ ಒದಗಿಸಬೇಕು’ ಎಂದು ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.