ಬೆಂಗಳೂರು: ಹಿರಿಯ ನಾಗರಿಕರ ಯೋಗಕ್ಷೇಮಕ್ಕಾಗಿ ಇದುವರೆಗೂ ದಿನದ 12 ಗಂಟೆಗಳ ಕಾಲ ಕಾರ್ಯನಿರ್ವಹಿಸುತ್ತಿದ್ದ ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿನ ಸಹಾಯವಾಣಿ, ಇನ್ನು ದಿನದ 24 ಗಂಟೆಯೂ ಸೇವೆ ಒದಗಿಸಲಿದೆ.
ಈ ಕುರಿತು ಪ್ರಕಟಣೆ ಹೊರಡಿಸಲಾಗಿದ್ದು, ಹಿರಿಯರ ಬೇಡಿಕೆಗೆ ಅನುಗುಣವಾಗಿ ಈ ಸೇವೆಯನ್ನು ಏ.26 ರಿಂದ ಆರಂಭಿಸುವುದಾಗಿ ತಿಳಿಸಲಾಗಿದೆ. ನಗರದಲ್ಲಿ ಲಕ್ಷಾಂತರ ಜನ ಹಿರಿಯರು ದೈಹಿಕ, ಮಾನಸಿಕ ಹಾಗೂ ಆರ್ಥಿಕವಾಗಿ ತೊಂದರೆಗಳನ್ನು ಅನುಭವಿಸುತ್ತಲೇ ಇದ್ದಾರೆ. ಇವರ ಮೇಲಾಗುತ್ತಿರುವ ದೌರ್ಜನ್ಯಗಳ ಸಂಖ್ಯೆಯೂ ಹೆಚ್ಚುತ್ತಿರುವ ಪರಿಣಾಮ ಈ ಸೇವೆಯನ್ನು ವಿಸ್ತರಿಸಲಾಗಿದೆಯಂತೆ.
ಹಿರಿಯ ನಾಗರಿಕರ ಸಹಾಯವಾಣಿ ಬೆಂಗಳೂರಿನಲ್ಲಿ ಆರಂಭವಾಗಿದ್ದು ಇದು ದೇಶದಲ್ಲಿಯೇ ಪ್ರಪ್ರಥಮ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ. 15 ವರ್ಷಗಳಲ್ಲಿ ಅಂದಾಜು 1.6 ಲಕ್ಷ ಕರೆಗಳನ್ನು ಸ್ವೀಕರಿಸಲಾಗಿದ್ದು, 8662 ಗಂಭೀರ ಪ್ರಕರಣಗಳು ದಾಖಲಾಗಿವೆ ಎನ್ನಲಾಗಿದೆ.
ವಿಸ್ತರಿಸಿರುವ ಈ ಸೇವೆಯನ್ನು ಪೋಲಿಸ್ ಆಯುಕ್ತ ಪ್ರವೀಣ್ ಸೂದ್ ಪೋಲಿಸ್ ಆಯುಕ್ತರ ಕಚೇರಿಯ ಸಭಾಂಗಣದಲ್ಲಿ ನಾಳೆ ಮಧ್ಯಾಹ್ನ 12 ಗಂಟೆಗೆ ಅನಾವರಣಗೊಳಿಸಲಿದ್ದಾರೆ. ಸಹಾಯವಾಣಿಯ ಸಿಬ್ಬಂದಿಯನ್ನು ಸಂಪರ್ಕಿಸಲು ದೂರವಾಣಿ ಸಂಖ್ಯೆ: 1090 (ದರ ರಹಿತಕರೆ) ಹಾಗೂ 080-22943226 ಗೆ ಕರೆ ಮಾಡಬಹುದು ಎಂದು ತಿಳಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.