ಬೆಂಗಳೂರು: ಮೇ 1 ರ ವರೆಗೂ ಅವಕಾಶವಿದೆ. ಅದಕ್ಕೂ ಮೊದಲೇ ನಾನೇಕೆ ಕೆಂಪು ದೀಪ ತೆಗೆಯಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಮಾಧ್ಯಮದೊಂದಿಗೆ ಮಾತನಾಡಿರುವ ಅವರು, ಕೇಂದ್ರ ಸಚಿವ ಸಂಪುಟ ಈ ಕುರಿತು ನಿರ್ಣಯಿಸಿದೆ. ಆದರೆ ಅದು ಜಾರಿಗೆ ಬರಬೇಕಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.
ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರೂ ಇದೇ ರೀತಿ ಪ್ರತಿಕ್ರಿಯಿಸಿದ್ದು, ಈ ಕುರಿತು ಅಧಿಕೃತವಾಗಿ ನಮಗಿನ್ನೂ ಆದೇಶ ಬಂದಿಲ್ಲಸ ಆದ್ದರಿಂದ ಮಾಧ್ಯಮಗಳು ಈಗಲೇ ಇದನ್ನು ಒಂದು ದೊಡ್ಡ ವಿವಾದವೆಂಬಂತೆ ಪ್ರತಿಬಿಂಬಿಸುವುದು ಬೇಡ ಎಂದಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಕೂಡಾ ಇನ್ನೂ ಕೆಂಪು ದೀಪದ ಕಾರಿನಲ್ಲೇ ಓಡಾಡುತ್ತಿದ್ದಾರೆ. ಈ ಕುರಿತು ಅವರನ್ನು ಕೇಳಿದರೆ ಕೇಂದ್ರ ಸರ್ಕಾರ ಪತ್ರಿಕೆಯಲ್ಲಿ ಪ್ರಕಟಿಸಿದೆ. ಆದರೆ ಅಧಿಕೃತವಾಗಿ ಇದುವರೆಗೂ ಆದೇಶ ಹೊರಡಿಸಿಲ್ಲ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.