ನವದೆಹಲಿ: ಕೃಷಿ ಆದಾಯದ ಮೇಲೆ ಯಾವುದೇ ತೆರಿಗೆಗಳನ್ನು ವಿಧಿಸುವ ಯೋಜನೆ ಸರ್ಕಾರದ ಮುಂದೆ ಇಲ್ಲ ಎಂಬುದನ್ನು ಬುಧವಾರ ವಿತ್ತ ಸಚಿವ ಅರುಣ್ ಜೇಟ್ಲಿ ಸ್ಪಷ್ಟಪಡಿಸಿದ್ದಾರೆ.
ನಿನ್ನೆಯಷ್ಟೇ ನೀತಿ ಆಯೋಗದ ಸದಸ್ಯ ಬಿಬೇಕ್ ದೆಬ್ರಾಯ್ ಅವರು ಕೃಷಿ ಆದಾಯದ ಮೇಲೆ ತೆರಿಗೆ ವಿಧಿಸಬೇಕು ಎಂದು ಹೇಳಿದ್ದರು. ಈ ಹಿನ್ನಲೆಯಲ್ಲಿ ಜೇಟ್ಲಿ ಟ್ವಿಟರ್ ಮೂಲಕ ಸ್ಪಷ್ಟನೆ ನೀಡಿದ್ದಾರೆ.
FM @arunjaitley : I categorically state that the Central Government has no plan to impose any tax on agriculture income .
— Ministry of Finance (@FinMinIndia) April 26, 2017
FM @arunjaitley :As per the Constitutional Allocation of Powers, the Central Govt has no jurisdiction to impose tax on agricultural income.
— Ministry of Finance (@FinMinIndia) April 26, 2017
ಅಂತಹ ಯಾವ ಯೋಜನೆಯೂ ಸರ್ಕಾರ ಮುಂದೆ ಇಲ್ಲ, ಅಲ್ಲದೇ ಸಂವಿಧಾನ ನೀಡಿರುವ ಅಧಿಕಾರದಲ್ಲಿ ಕೃಷಿ ಆದಾಯಗೆ ತೆರಿಗೆ ವಿಧಿಸುವ ಹಕ್ಕು ಕೇಂದ್ರ ಸರ್ಕಾರಕ್ಕಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.