ನವದೆಹಲಿ: ರೈಲ್ವೇ ಅಧಿಕಾರಿಗಳು ನಡೆಸುತ್ತಿರುವ ಭ್ರಷ್ಟಾಚಾರದ ಬಗ್ಗೆ ಬಂದಿರುವ ಹಲವಾರು ದೂರುಗಳನ್ನು ಗಂಭೀರವಾಗಿ ಪರಿಗಣಿಸಿರುವ ಪ್ರಧಾನಿ ನರೇಂದ್ರ ಮೋದಿ, ತಪ್ಪಿತಸ್ಥರ ವಿರುದ್ಧ ಅತೀ ಕಠಿಣ ಕ್ರಮ ಜರುಗಿಸುವಂತೆ ಆದೇಶ ನೀಡಿದ್ದಾರೆ.
ರೈಲ್ವೇಯಲ್ಲಿ ನಡೆಯುತ್ತಿರುವ ಮಹತ್ವದ ಮೂಲಭೂತ ಸೌಕರ್ಯ ಯೋಜನೆಗಳ ಪ್ರಗತಿಯ ಬಗ್ಗೆ ಪರಿಶೀಲನೆ ನಡೆಸಿದ ವೇಳೆ ಅವರು ಈ ಆದೇಶ ನೀಡಿದ್ದಾರೆ.
ಪ್ರಯಾಣಿಕರ ಕುಂದುಕೊರೆತೆಗಳನ್ನು ಆಲಿಸಲು ಮತ್ತು ತನಿಖೆ ನಡೆಸಲು ಯೂನಿಫೈಯ್ಡ್ ಸಿಂಗಲ್ ಟೆಲಿಫೋನ್ ನಂಬರ್ನತ್ತ ಕಾರ್ಯನಿರ್ವಹಿಸುವಂತೆ ಅವರು ರೈಲ್ವೇಗೆ ತಿಳಿಸಿದರು.
ರೈಲ್ವೇ ಅಧಿಕಾರಿಗಳು ನಡೆಸುತ್ತಿರುವ ಭ್ರಷ್ಟ ಕಾರ್ಯಗಳ ಬಗ್ಗೆ ಸಾಕಷ್ಟು ದೂರುಗಳು ಬರುತ್ತಲೇ ಇದೆ, ಇದನ್ನು ಪರಗಣನೆಗೆ ತೆಗೆದುಕೊಂಡು ಕಠಿಣ ಕ್ರಮ ಜರುಗಿಸಬೇಕು ಎಂದು ಅವರು ಆಜ್ಞಾಪಿಸಿದ್ದಾರೆ, ಅಲ್ಲದೇ ತಮ್ಮ ಸರ್ಕಾರ ಭ್ರಷ್ಟಾಚಾರವನ್ನು ಕಿತ್ತು ಹಾಕಲು ಬದ್ಧವಾಗಿದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.