ಲಕ್ನೋ: ಪಾಕ್ ಗುಪ್ತಚರ ಇಲಾಖೆ ಐಎಸ್ಐ ಬೆಂಬಲಿತ ಉಗ್ರ ಸಂಘಟನೆಗಳು ಹಿಂದೂ ಧಾರ್ಮಿಕ ಸ್ಥಳಗಳ ಮೇಲೆ ದಾಳಿ ನಡೆಸುವ ಸಾಧ್ಯತೆ ಇದೆ ಎಂಬ ವರದಿಗಳ ಹಿನ್ನಲೆಯಲ್ಲಿ ಧಾರ್ಮಿಕ ಸ್ಥಳಗಳ ಸುತ್ತಲೂ ದೊಡ್ಡ ಗೋಡೆಗಳನ್ನು ನಿರ್ಮಿಸುವಂತೆ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ ಅವರು ಕರೆ ನೀಡಿದ್ದಾರೆ.
ಇತ್ತೀಚಿಗಷ್ಟೇ ಕಾವಿ ಬಟ್ಟೆಯನ್ನು ಉಟ್ಟು ಉಗ್ರರು ಧಾರ್ಮಿಕ ಸ್ಥಳಗಳನ್ನು ಪ್ರವೇಶಿಸಿ ಅನಾಹುತ ಮಾಡುವ ಸಾಧ್ಯತೆ ಇದೆ ಎಂಬ ಬಗ್ಗೆ ಮಾಹಿತಿ ಪಡೆದಿರುವುದಾಗಿ ಮಥುರ ಎಎಸ್ಪಿ ಸಿದ್ಧಾರ್ಥ್ ವರ್ಮಾ ಹೇಳಿದ್ದರು.
ಈ ಹಿನ್ನಲೆಯಲ್ಲಿ ರಕ್ಷಣೆಗಾಗಿ ಧಾರ್ಮಿಕ ಸ್ಥಳಗಳ ಸುತ್ತಲೂ ದೊಡ್ಡ ಬೌಂಡರಿ ಗೋಡೆಗಳನ್ನು ಕಟ್ಟುವಂತೆ ಧಾರ್ಮಿಕ ದತ್ತಿ ಇಲಾಖೆಗೆ ಯೋಗಿ ನಿರ್ದೇಶನ ನೀಡಿದ್ದಾರೆ. ಅಲ್ಲದೇ ಪ್ರಸಿದ್ಧ ದೇಗುಲಗಳನ್ನು ಸಂಪರ್ಕಿಸುವ ರಸ್ತೆಗಳಲ್ಲಿ ಯಾತ್ರಿಕರ ಅನುಕೂಲಕ್ಕಾಗಿ ನಾಲ್ಕು ಲೇನ್ಗಳು ಇರುವಂತೆ ನೋಡಿಕೊಳ್ಳಿ ಎಂದಿದ್ದಾರೆ.
ಐಎಸ್ಐಯಿಂದ ತರಬೇತಿ ಪಡೆದ ಉಗ್ರ ಸಂಘಟನೆಗಳು ಮಥುರಾ, ವಾರಣಾಸಿ, ಅಯೋಧ್ಯಾ ಮುಂತಾದ ಕಡೆ ದಾಳಿ ನಡೆಸುವ ಸಾಧ್ಯತೆ ಇದೆ ಎಂಬುದಾಗಿ ವರದಿಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.