ನವದೆಹಲಿ: ಸಮಾಜದಲ್ಲಿನ ಲಿಂಗ ತಾರತಮ್ಯವನ್ನು ಹೋಗಲಾಡಿಸುವುದಕ್ಕಾಗಿ ಹುಡುಗರನ್ನು ಕಾಲೇಜುಗಳಲ್ಲಿ ಹೋಂ ಸೈನ್ಸ್ ಕಲಿಯಲು ಪ್ರೇರೆಪಿಸಬೇಕು ಮತ್ತು ಹೆಣ್ಣು ಮಕ್ಕಳಿಗೆ ಮಾರ್ಷಲ್ ಆರ್ಟ್ಸ್ ಕಲಿಸಬೇಕು ಎಂದು ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ ಸಲಹೆ ನೀಡಿದ್ದಾರೆ.
ಮಹಿಳೆಯರಿಗೆ ರಾಷ್ಟ್ರೀಯ ನಿಯಮಾವಳಿಗಳನ್ನು ರೂಪಿಸುವ ಬಗ್ಗೆ ಸಚಿವ ಸಮೂಹದೊಂದಿಗೆ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ವೇಳೆ ಅವರು ಈ ಸಲಹೆ ನೀಡಿದ್ದಾರೆ.
16 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಮಹಿಳಾ ನಿಯಮಗಳನ್ನು ಪರಿಷ್ಕರಿಸಲಾಗುತ್ತಿದೆ. ಇದು ಪ್ರಸ್ತುತ ಸವಾಲುಗಳನ್ನು ಅದರಲ್ಲೂ ಮುಖ್ಯವಾಗಿ ಮಹಿಳೆಯರ ಆರೋಗ್ಯ, ಶಿಕ್ಷಣ, ಉದ್ಯೋಗದತ್ತ ಹೆಚ್ಚಿನ ಗಮನ ಕೊಡಲಿದೆ ಎಂದರು.
ಮಹಿಳೆಯರ ಬಗೆಗೆ ಇರುವ ಸಾಂಪ್ರದಾಯಿಕ ಮನಸ್ಥಿತಿಯನ್ನು ಮುರಿಯಲು ಪುರುಷರು ಹೊಂ ಸೈನ್ಸ್ ಕಲಿಯುವಂತೆ ಪ್ರೇರೇಪಿಸಬೇಕು. ಇದರಿಂದ ಪುರುಷರೂ ಮಹಿಳೆಯರ ಬದುಕು ಉತ್ತಮಗೊಳ್ಳಲು ಕೊಡುಗೆ ನೀಡಿದಂತಾಗುತ್ತದೆ. ಪುರುಷ-ಮಹಿಳೆ ಇಬ್ಬರೂ ದುಡಿದರೂ ಮಹಿಳೆಯರಿಗೆ ಕೆಲಸದ ಒತ್ತಡ ಹೆಚ್ಚಿರುತ್ತದೆ ಎಂದು ಸುಷ್ಮಾ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.