ಬೆಂಗಳೂರು: ರಾಜ್ಯ ಸರ್ಕಾರ ಇದೇ ಮೊದಲ ಬಾರಿಗೆ ರಾಷ್ಟ್ರೀಯ ಸಿರಿಧಾನ್ಯ ಮೇಳವನ್ನು ಹಮ್ಮಿಕೊಂಡಿದ್ದು, ಇದು ನಮ್ಮ ಸರ್ಕಾರ ತಂದ ಸಾವಯವ ಭಾಗ್ಯ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.
ಇಲ್ಲಿನ ಅರಮನೆ ಮೈದಾನದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ನಡೆಯಲಿರುವ ರಾಷ್ಟ್ರೀಯ ಸಿರಿಧಾನ್ಯ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, 14 ಸಾವಿರ ಸಾವಯವ ರೈತರ ಒಕ್ಕೂಟ ನಿರ್ಮಿಸಿ ಅವರಿಗೆ ತರಬೇತಿ ನೀಡಲಾಗಿದೆ ಎಂದು ಬೈರೇಗೌಡ ಹೇಳಿದ್ದಾರೆ.
ರೈತರು ಹಾಗೂ ಗ್ರಾಹಕರ ನಡುವೆ ನೇರ ಸಂಪರ್ಕ ಬೆಳೆಸುವುದೇ ನಮ್ಮ ಗುರಿ ಎಂದಿರುವ ಅವರು, ಇಂದಿನ ಆಹಾರ ಶೈಲಿಯಿಂದ ಅನಾರೋಗ್ಯ ಹೆಚ್ಚುತ್ತಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಸಿರಿಧಾನ್ಯಗಳಿಗೆ ಉತ್ತಮ ಮಾರುಕಟ್ಟೆ ವ್ಯವಸ್ಥೆಯಾಗಬೇಕೆಂದ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರು, ಸಿರಿಧಾನ್ಯ ಕೃಷಿ ಹಾಗೂ ಮಾರಾಟಕ್ಕೆ ಉತ್ತೇಜನ ನೀಡುತ್ತಿರುವುದು ಸ್ವಾಗತಾರ್ಹ ಎಂದಿದ್ದಾರೆ.
ಸಿರಿಧಾನ್ಯಕ್ಕೆ ಸಬ್ಸಿಡಿ ನೀಡಿರುವ ಮೊದಲ ಸರ್ಕಾರವೇ ಮೋದಿ ಸರ್ಕಾರ ಎಂದು ಹೇಳಿದ ಕೇಂದ್ರ ಸಚಿವ ಅನಂತಕುಮಾರ್, ನಾನು ಕೇವಲ ರಸಗೊಬ್ಬರ ಸಚಿವನಲ್ಲ, ಕೆಮಿಕಲ್ ಮತ್ತು ಆರ್ಗೆನಿಕ್ ಎರಡನ್ನೂ ಒಳಗೊಂಡಿದೆ ಎಂದರು.
ಕೃಷಿ ಇಲಾಖೆ ಹೊರತಂದಿರುವ ಪುಸ್ತಕಗಳನ್ನು ಬಿಡುಗಡೆ ಮಾಡಲಾಯಿತು. ಗ್ರಾಮೀಣಾಭಿವೃದ್ಧಿ ಸಚಿವ ಎಚ್ಕೆ ಪಾಟೀಲ್ ಹಾಗೂ ಇತರರು ಇದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.