ಲಖ್ನೋ : ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರ ಇಂದಿನಿಂದ ಮಹತ್ವದ ಕಾರ್ಯಕ್ರಮವೊಂದನ್ನು ಆರಂಭಿಸಿದ್ದು, ಇದರನ್ವಯ ಪ್ರತಿನಿತ್ಯ ಅಲ್ಲಿನ ಸಚಿವರು ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಲಿದ್ದಾರೆ.
ಸಾರ್ವಜನಿಕರೊಂದಿಗೆ ನೇರ ಸಂಪರ್ಕವನ್ನು ಸಾಧಿಸುವ ಸಲುವಾಗಿ ಅವರ ಕುಂದು ಕೊರತೆಗಳನ್ನು ಆಲಿಸಿ ಶೀಘ್ರದಲ್ಲೇ ಇದಕ್ಕೆ ಪರಿಹಾರ ಒದಗಿಸುವುದಾಗಿ ಸಿಎಂ ಯೋಗಿ ಈ ಕಾರ್ಯಕ್ರಮವನ್ನು ಆರಂಭಿಸಿದ್ದಾರೆ.
“ಉತ್ತರ ಪ್ರದೇಶದ ಜನ ನಮ್ಮ ಮೇಲೆ ವಿಶ್ವಾಸವನ್ನು ಇಟ್ಟಿದ್ದಾರೆ. ಅವರ ಆಶಯಗಳನ್ನು ಯೋಗಿ ಸರ್ಕಾರ ಈಡೇರಿಸಲಿದೆ. 15 ವರ್ಷಗಳ ನಂತರ ಯುಪಿ ಸರ್ಕಾರದಲ್ಲಿ ಮಹತ್ವದ ಬದಲಾವಣೆ ಆಗಿದೆ. ಜನರ ಸಮಸ್ಯೆಗಳು ಬಹಳಷ್ಟು ಇದ್ದು ಅದನ್ನು ನಿವಾರಿಸಬೇಕಾಗಿದೆ” ಎಂದು ಉತ್ತರ ಪ್ರದೇಶದ ಕೃಷಿ ಸಚಿವ ಸೂರ್ಯ ಪ್ರಕಾಶ್ ಸಾಹಿ ಹೇಳಿದ್ದಾರೆ.
ದುರಾಡಳಿತದಿಂದ ಬೇಸತ್ತು 15 ವರ್ಷಗಳ ಬಳಿಕ ಯುಪಿ ಜನರು ಬಿಜೆಪಿ ಮತ ಹಾಕಿದ್ದಾರೆ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.