ಶ್ರೀನಗರ: ಕಾಶ್ಮೀರದಲ್ಲಿ ಉಲ್ಬಣಗೊಳ್ಳುತ್ತಿರುವ ಸಮಸ್ಯೆಯನ್ನು ಕೇವಲ ಪ್ರಧಾನಿ ನರೇಂದ್ರ ಮೋದಿಯವರಿಗೆ ಮಾತ್ರ ಪರಿಹರಿಸಲು ಸಾಧ್ಯವಿದೆ ಎಂದು ಜಮ್ಮು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಹೇಳಿದ್ದಾರೆ.
ಮೆಹಬೂಬಾ ಸರ್ಕಾರವನ್ನು ವಿಸರ್ಜಿಸಿ ಅಲ್ಲಿ ರಾಷ್ಟ್ರಪತಿ ಆಡಳಿತವನ್ನು ನಡೆಸಲು ಕೇಂದ್ರ ಚಿಂತನೆ ನಡೆಸುತ್ತಿದ್ದ ಎಂಬ ವದಂತಿಗಳ ಬೆನ್ನಲ್ಲೇ ಮೆಹಬೂಬಾ ಈ ಹೇಳಿಕೆ ನೀಡಿದ್ದಾರೆ.
ಜಮ್ಮುವಿನಲ್ಲಿ ಫ್ಲೈಓವರ್ ಉದ್ಘಾಟಿಸಿ ಮಾತನಾಡಿದ ಅವರು, ‘ಪ್ರಧಾನಿಗೆ ಈ ದೇಶದ ಜನ ಸ್ಪಷ್ಟ ಜನಾದೇಶವನ್ನು ನೀಡಿದ್ದಾರೆ. ಟೀಕೆ ವ್ಯಕ್ತವಾದರೂ ಪರವಾಗಿಲ್ಲ ಮತ್ತೊಂದು ಬಾರಿ ಹೇಳುತ್ತೇನೆ ಕಾಶ್ಮೀರದ ಸಮಸ್ಯೆಯನ್ನು ಪರಿಹರಿಸುವವರಿದ್ದರೆ ಅದು ಕೇವಲ ಮೋದಿ ಮಾತ್ರ’ ಎಂದಿದ್ದಾರೆ.
‘ಜಮ್ಮು ಮತ್ತು ಕಾಶ್ಮೀರ ಈಗಿರುವ ಹಿಂಸಾತ್ಮಕ ಸನ್ನಿವೇಶದಿಂದ ಹೊರಬರಬೇಕಿದೆ, ಇದಕ್ಕೆ ಮೋದಿ ಮಾತ್ರ ಸಹಾಯ ಮಾಡಬಲ್ಲರು’ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.