ನವದೆಹಲಿ: ಭಾರತದ ಮಾಜಿ ನೌಕದಳದ ಅಧಿಕಾರಿ ಕುಲಭೂಷಣ್ ಜಾಧವ್ ಅವರಿಗೆ ಪಾಕಿಸ್ಥಾನ ಆರ್ಮಿ ಕೋರ್ಟ್ ವಿಧಿಸಿರುವ ಮರಣದಂಡನೆ ಶಿಕ್ಷೆಗೆ ಅಂತಾರಾಷ್ಟ್ರೀಯ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.
ಯಾದವ್ ಅವರು ಬೇಹುಗಾರಿಕೆ ನಡೆಸಿದ್ದಾರೆ ಎಂಬ ಆರೋಪವನ್ನು ಪಾಕ್ ಹೊರಿಸಿದ್ದು, ಕಳೆದ ತಿಂಗಳು ಅಲ್ಲಿನ ಫೀಲ್ಡ್ ಜನರಲ್ ಕೋರ್ಟ್ ಮಾರ್ಷಲ್ ಅವರಿಗೆ ಮರಣದಂಡನೆಯ ಶಿಕ್ಷೆಯನ್ನು ವಿಧಿಸಿತ್ತು. ಇದನ್ನು ತೀವ್ರವಾಗಿ ವಿರೋಧಿಸಿದ್ದ ಭಾರತ ಹಾಗ್ಯೂ ಮೂಲದ ಇಂಟರ್ನ್ಯಾಷನಲ್ ಕೋರ್ಟ್ ಆಫ್ ಜಸ್ಟಿಸ್(ಐಸಿಜೆ)ಗೆ ಅರ್ಜಿ ಸಲ್ಲಿಸಿತ್ತು.
ಪಾಕಿಸ್ಥಾನ ಕಾನ್ಸುಲರ್ ರಿಲೇಶನ್ಸ್ ಬಗೆಗಿನ ವಿಯೆನ್ನ ಕನ್ವೆನ್ಶನ್ನನ್ನು ಉಲ್ಲಂಘಿಸಿದೆ, ನೌಕಾಪಡೆಯಿಂದ ನಿವೃತ್ತರಾದ ಬಳಿಕ ಜಾಧವ್ ಅವರು ಇರಾನ್ನಲ್ಲಿ ವ್ಯವಹಾರ ನಡೆಸುತ್ತಿದ್ದರು ಅವರನ್ನು ಅಲ್ಲಿ ಕಿಡ್ನ್ಯಾಪ್ ಮಾಡಲಾಗಿತ್ತು. ಆದರೆ ಪಾಕಿಸ್ಥಾನ ಅವರನ್ನು ನಾವು 2017ರ ಮಾರ್ಚ್ 3ರಂದು ಬಲೂಚಿಸ್ತಾನದಲ್ಲಿ ಬಂಧಿಸಿದ್ದೇವೆ ಎನ್ನುತ್ತಿದೆ ಎಂದು ಭಾರತ ಇಂಟರ್ನ್ಯಾಷನಲ್ ಕೋರ್ಟ್ಗೆ ತಿಳಿಸಿದೆ.
ಭಾರತದ ಮನವಿಯ ಹಿನ್ನಲೆಯಲ್ಲಿ ಇಂಟರ್ನ್ಯಾಷನಲ್ ಕೋರ್ಟ್ ಜಾಧವ್ ಅವರ ಮರಣದಂಡನೆ ಶಿಕ್ಷೆಗೆ ತಡೆಯಾಜ್ಞೆ ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.