ಕೊಲೊಂಬೋ: ಭಾರತೀಯ ಮೂಲದವರೇ ಹೆಚ್ಚಾಗಿರುವ ಶ್ರೀಲಂಕಾದ ಡಿಕೊಯದಲ್ಲಿ ಭಾರತದ ಸಹಕಾರದೊಂದಿಗೆ ನಿರ್ಮಿಸಲಾದ 150 ಕೋಟಿ ರೂಪಾಯಿ ವೆಚ್ಚದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಉದ್ಘಾಟಿಸಿದರು.
ಶ್ರೀಲಂಕಾ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ಅವರೂ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಡಿಕೊಯಾ ಚಹಾ ಬೆಳೆಗೆ ಪ್ರಸಿದ್ಧಿಯನ್ನು ಪಡೆದಿದ್ದು, ತಮಿಳು ಭಾಷಿಕ ಭಾರತೀಯ ಮೂಲದವರ ಸಂಖ್ಯೆ ಇಲ್ಲಿ ಹೆಚ್ಚಾಗಿದೆ.
ಅಂತಾರಾಷ್ಟ್ರೀಯ ವೆಸಕ್ ದಿನ ಸಮಾರಂಭದಲ್ಲಿ ಭಾಗಿಯಾಗುವ ಸಲುವಾಗಿ ಎರಡು ದಿನಗಳ ಶ್ರೀಲಂಕಾ ಪ್ರವಾಸವನ್ನು ಮೋದಿ ಕೈಗೊಂಡಿದ್ದಾರೆ.
ಪ್ರಧಾನಿಯಾದ ಬಳಿಕ ಇದು ಮೋದಿಯ ಎರಡನೇ ಶ್ರೀಲಂಕಾ ಭೇಟಿಯಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.