ತುಮಕೂರು : ಬರ ಪೀಡಿತ ಪ್ರದೇಶಗಳ ಜನರ ಸಂಕಷ್ಟಗಳಿಗೆ ಸ್ಪಂದಿಸದ ಜನವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಾಭಿಪ್ರಾಯ ಮೂಡಿಸಲು ಮೇ 18 ರಿಂದ ಜೂನ್ 29 ರವರೆಗೆ ರಾಜ್ಯವ್ಯಾಪಿ ಜನಸಂಪರ್ಕ ಅಭಿಯಾನವನ್ನು ಕೈಗೊಳ್ಳಲಾಗಿದೆ.
ಮೇ 18 ರಂದು ತುಮಕೂರಿನಲ್ಲಿ ಜನಸಂಪರ್ಕ ಅಭಿಯಾನಕ್ಕೆ ವಿದ್ಯುಕ್ತ ಚಾಲನೆಯನ್ನು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ಎಸ್. ಯಡಿಯೂರಪ್ಪನವರು ನೀಡಿದರು.
ನಡೆದಾಡುವ ದೇವರು ಶ್ರೀ ಶ್ರೀ ಶಿವಕುಮಾರ ಸ್ವಾಮಿಗಳಿಗೆ ವ೦ದಿಸಿ ತುಮಕೂರಿನಿಂದ ಯಾತ್ರೆಯನ್ನು ಪ್ರಾರ೦ಭಿಸಿದರು. ಯಾತ್ರೆಯಲ್ಲಿ ಬಿ.ಎಸ್. ಯಡಿಯೂರಪ್ಪನವರೊಂದಿಗೆ ರಾಜ್ಯ ಬಿಜೆಪಿ ಉಸ್ತುವಾರಿ ಮುರಳೀಧರ್ ರಾವ್, ಕೇ೦ದ್ರ ಸಚಿವರುಗಳಾದ ಅನ೦ತ್ ಕುಮಾರ್, ಸದಾನ೦ದ ಗೌಡ, ಪಕ್ಷದ ನಾಯಕರುಗಳಾದ ಜಗದೀಶ್ ಶೆಟ್ಟರ್, ಕೆ.ಎಸ್.ಈಶ್ವರಪ್ಪ, ಆರ್. ಅಶೋಕ್, ಗೋವಿ೦ದ ಕಾರಜೋಳ, ಕು. ಶೋಭಾ ಕರ೦ದ್ಲಾಜೆ, ಸಿ.ಟಿ.ರವಿ, ಸೋಮಣ್ಣ, ನಾರಾಯಣಸ್ವಾಮಿ, ಶ್ರೀರಾಮುಲು ಸೇರಿದಂತೆ ಅನೇಕ ಪ್ರಮುಖ ನಾಯಕರು, ಸಾವಿರಾರು ಕಾರ್ಯಕರ್ತರು ಪಾಲ್ಗೊ೦ಡಿದ್ದರು.
ಇಂದು ತುಮಕೂರು ನಗರದ ಮರಳೂರು ದಿಣ್ಣೆಯ ದಲಿತ ಕಾಲೋನಿ, ಹರಿಜನ ಕಾಲೋನಿ ಮತ್ತು ಸೇವಾ ಬಸದಿಗಳಿಗೆ ಭೇಟಿ ನೀಡಿ ಅಲ್ಲಿನ ನಾಗರಿಕರೊ೦ದಿಗೆ ಅವರ ಕು೦ದು-ಕೊರತೆಗಳ ಬಗ್ಗೆ ವಿಚಾರಿಸಿದರು ಮತ್ತು ಅವರಿ೦ದ ನೂರಾರು ಅಹವಾಲುಗಳನ್ನು ಸ್ವೀಕರಿಸಿದರು.
ಇಂದಿನಿಂದ 36 ದಿನಗಳ ಕಾಲ ರಾಜ್ಯ ಪ್ರವಾಸವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ. ಎಸ್. ಯಡಿಯೂರಪ್ಪನವರು ಮಾಡಲಿದ್ದಾರೆ.
ತುಮಕೂರು, ಚಿತ್ರದುರ್ಗ, ಬೆಂಗಳೂರು, ಬಾಗಲಕೋಟೆ, ಗದಗ, ಹುಬ್ಬಳ್ಳಿ-ಧಾರವಾಡ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಕಲ್ಬುರ್ಗಿ ಮತ್ತು ಗ್ರಾಮಾಂತರ, ಬೀದರ್, ಚಿಕ್ಕೋಡಿ, ಬೆಳಗಾವಿ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ರಾಮನಗರ, ಬಳ್ಳಾರಿ ಹಾಗೂ ವಿಜಯಪುರಗಳಲ್ಲಿ ಜನಸಂಪರ್ಕ ಅಭಿಯಾನ ನಡೆಸಲಿದ್ದಾರೆ.
ಈ ವೇಳೆ ಅಲ್ಲಿನ ದಲಿತರ ಕಾಲೋನಿಗಳಿಗೆ ಭೇಟಿ, ಬರ ವೀಕ್ಷಣೆ, ಸಾರ್ವಜನಿಕ ಸಭೆ ಮತ್ತು ಕಾರ್ಯಕರ್ತರ ಸಭೆಯನ್ನು ನಡೆಸಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.