ದಾವಣಗೆರೆ: ರಾಜ್ಯ ಕಾಂಗ್ರೆಸ್ ಸರಕಾರ ಎರಡು ವರ್ಷ ಪೂರೈಸಿರುವ ಹಿನ್ನಲೆಯಲ್ಲಿ ನಡೆಸಲಾಗುತ್ತಿರುವ ’ಸರ್ವೋದಯ ಸಮಾವೇಶ’ಕ್ಕೆ ಭಾರೀ ಸಿದ್ಧತೆಗಳು ನಡೆದಿವೆ.
ಸಮಾವೇಶವು ನಗರದ ಬಾಪೂಜಿ ಎಂಬಿಎ ಕಾಲೇಜಿನ ಮೈದಾನದಲ್ಲಿ ಶನಿವಾರ ನಡೆಯಲಿದ್ದು, 400 ಆಸನಗಳುಳ್ಳ ವೇದಿಕೆ ಸಿದ್ಧಗೊಂಡಿದೆ. ಕಾರ್ಯಕ್ರಮವು ಬೆಳಗ್ಗೆ 11.30 ಗಂಟೆಗೆ ಆರಂಭಗೊಳ್ಳಲಿದೆ.
ಸಮಾವೇಶದಲ್ಲಿ ಸುಮಾರು 5 ಲಕ್ಷ ಜನರು ಸೇರುವ ನಿರೀಕ್ಷೆ ಇದೆ. ವೇದಿಕೆ ಹಾಗೂ ಮೈದಾನದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ರಾಜ್ಯದ ನಾನಾ ಭಾಗಗಳಿಂದ ಸುಮಾರು 5 ಲಕ್ಷ ಮಂದಿ ಸೇರುವ ನಿರೀಕ್ಷೆಯಿದ್ದು, ಒಂದು ಲಕ್ಷ ಆಸನಗಳನ್ನು ಈಗಾಗಲೇ ಹಾಕಲಾಗಿದೆ.
ಈ ಸಮಾವೇಶ ಐತಿಹಾಸವಾಗಲಿದೆ ಎಂದು ಲೋಕೋಪಯೋಗಿ ಸಚಿವ ಡಾ. ಎಚ್.ಸಿ. ಮಹಾದೇವಪ್ಪ ಹೇಳಿದ್ದಾರೆ. ರಾಜ್ಯದ 30 ಜಿಲ್ಲೆಗಳಿಂದ ಪಕ್ಷದ ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳು, ಕಾರ್ಯಕರ್ತರು ಆಗಮಿಸಲಿದ್ದಾರೆ ಎಂದು ಮಾಜಿ ಸಚಿವ ಎಚ್.ಎಂ. ರೇವಣ್ಣ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.