ಬೆಳ್ತಂಗಡಿ: ನಕ್ಸಲ್ ಚಟುವಟಿಕೆಯಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ವಿಠಲ್ ಮಲೆಕುಡಿಯ ಅವರು ಈ ಬಾರಿಯ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ.
ಶನಿವಾರ ಬೆಳ್ತಂಗಡಿ ನಾರಾವಿ ಕ್ಷೇತ್ರದ ಕುತ್ಲೂರು ಗ್ರಾಮಪಂಚಾಯತ್ ಚುನಾವಣೆಗೆ ಅವರು ನಾಮಪತ್ರ ಸಲ್ಲಿಸಿದ್ದಾರೆ.
ಇವರು ಬೆಳ್ತಂಗಡಿ ಡಿವೈಎಫ್ಐ ತಾಲೂಕು ಅಧ್ಯಕ್ಷರೂ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಇವರು ಮಂಗಳೂರು ವಿಶ್ವವಿದ್ಯಾನಿಲಯದಿಂದ ಪತ್ರ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಪದವಿಯನ್ನೂ ಪಡೆದುಕೊಂಡಿದ್ದಾರೆ.
ವಿದ್ಯಾರ್ಥಿಯಾಗಿದ್ದಾಗಲೇ ಇವರ ಮೇಲೆ ನಕ್ಸಲ್ ಚಟುವಟಿಕೆಯಲ್ಲಿ ಭಾಗವಹಿಸಿದ್ದಾರೆ ಎಂಬ ಆರೋಪ ಬಂದಿದ್ದು, ಕೆಲದಿನಗಳ ಕಾಲ ಬಂಧನದಲ್ಲೂ ಇಡಲಾಗಿತ್ತು. ಇತ್ತೀಚಿಗಷ್ಟೇ ಪೊಲೀಸರು ಇವರ ಮೇಲೆ ಚಾರ್ಜ್ಶೀಟ್ ಸಲ್ಲಿಕೆ ಮಾಡಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.