ಲಕ್ನೋ: ಚಾಲನೆಯ ವೇಳೆ ಮೊಬೈಲ್ ಬಳಸುವುದಕ್ಕೆ ಅಂತ್ಯ ಹಾಡುವುದಕ್ಕಾಗಿ ಉತ್ತರಪ್ರದೇಶ ಸರ್ಕಾರ ಮಹತ್ವದ ಯೋಜನೆಯೊಂದನ್ನು ಆರಂಭಿಸಿದೆ.
ಪ್ರಯಾಣಿಕರು ಮೊಬೈಲ್ನಲ್ಲಿ ಮಾತನಾಡುತ್ತಾ ಚಾಲನೆ ಮಾಡುವ ಬಸ್ ಡ್ರೈವರ್ಗಳ ಫೋಟೋಗಳನ್ನು ತೆಗೆದು ಅದನ್ನು ವಾಟ್ಸಾಪ್ ಮೂಲಕ ಕಳುಹಿಸಿಕೊಟ್ಟರೆ ಅಂತವರಿಗೆ ಬಹುಮಾನ ನೀಡುವುದಾಗಿ ಅಲ್ಲಿನ ಸಾರಿಗೆ ಸಚಿವಾಲಯ ಘೋಷಿಸಿದೆ.
ನಿಯಮಗಳನ್ನು ಉಲ್ಲಂಘಿಸಿ, ಗಮನವನ್ನು ಬೇರೆಡೆಗೆ ಕೇಂದ್ರೀಕರಿಸಿ ಚಾಲನೆ ಮಾಡುವವರ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲು ಮತ್ತು ಇದರಿಂದ ಸಂಭವಿಸಬಹುದಾದ ಅಪಘಾತಗಳನ್ನು ತಪ್ಪಿಸಲು ಈ ವಿನೂತನ ಅಭಿಯಾನವನ್ನು ಆರಂಭಿಸಲಾಗಿದೆ.
ಪ್ರಯಾಣಿಕರು ಕಳುಹಿಸಿಕೊಟ್ಟ ಫೋಟೋದಲ್ಲಿನ ಡ್ರೈವರ್ಗಳ ವಿರುದ್ಧ ಕಠಿಣ ಕ್ರಮವನ್ನು ತೆಗೆದುಕೊಳ್ಳುವುದಾಗಿ ಸಚಿವಾಲಯ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.