ಮಂಗಳೂರು : ಹಿರಿಯ ಆರ್ಎಸ್ಎಸ್ ನಾಯಕ ಡಾ.ಪ್ರಭಾಕರ ಭಟ್ ಅವರನ್ನು ಬಂಧಿಸುವಂತೆ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ಒತ್ತಡ ಹಾಕಿರುವುದನ್ನು ಕೆಲವು ಕಾಂಗ್ರೆಸ್ ನಾಯಕರು ಸಮರ್ಥಿಕೊಳ್ಳುತ್ತಿರುವುದು ನಾಚಿಕೆಗೇಡಿನ ವಿಚಾರ. ಸಚಿವರಿಗೆ ಧೈರ್ಯವಿದ್ದರೆ ಹಿಂದೂ ನಾಯಕರನ್ನು ಬಂಧಿಸಲಿ ಎಂದು ಸಂಸದ ನಳಿನ್ಕುಮಾರ್ ಕಟೀಲ್ ಹೇಳಿದ್ದಾರೆ.
ಹಿಂದೂ ಸಮಾಜಕ್ಕೆ ಮಾರ್ಗದರ್ಶನ ನೀಡುತ್ತಿರುವ ಡಾ.ಪ್ರಭಾಕರ ಭಟ್ ಅವರನ್ನು ಎಕವಚನದಿಂದ ನಿಂದಿಸಿರುವ ಸಚಿವರ ದರ್ಪಕ್ಕೆ ಜಿಲ್ಲೆಯ ಜನತೆ ಆಕ್ರೋಶಿತರಾಗಿದ್ದಾರೆ. ಅಲ್ಪಸಂಖ್ಯಾತರನ್ನು ಓಲೈಸುವ ಏಕೈಕ ಉzಶದಿಂದ ಸಚಿವರು ಹಿಂದೂ ನಾಯಕರ ಬಂಧನಕ್ಕೆ ಒತ್ತಡ ಹೇರುತ್ತಿದ್ದಾರೆ. ಸಚಿವರ ಒತ್ತಡಕ್ಕೆ ಮಣಿದು ವಿನಾ ಕಾರಣ ಡಾ.ಪ್ರಭಾಕರ ಭಟ್ ವಿರುದ್ಧ ಕೇಸು ದಾಖಲಿಸಿದರೆ ಮುಂದೆ ನಡೆಯಬಹುದಾದ ಅನಾಹುತಗಳಿಗೆ ಸಚಿವರೇ ನೇರ ಹೊಣೆಯಾಗಲಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನೇತ್ರಾವತಿ ಹೋರಾಟಗಾರರನ್ನು ಬಂಧಿಸುವಂತೆ ಉಸ್ತುವಾರಿ ಸಚಿವರು ಹೇಳಿರುವುದು ಅಹಂಕಾರದ ಪರಮಾವಧಿಯಾಗಿದೆ. ಸಂಘಪರಿವಾರದ ಮನಸ್ಥಿತಿಯ ಪೊಲೀಸರನ್ನು ಎತ್ತಂಗಡಿ ಮಾಡಿಲ್ಲ ಯಾಕೆಂದು ಸಚಿವರು ಪ್ರಶ್ನಿಸಿದ್ದಾರೆ. ಕಾಂಗ್ರೆಸ್ ತಾಳಕ್ಕೆ ತಕ್ಕಂತೆ ಪೊಲೀಸ್ ಇಲಾಖೆ ಕುಣಿಯಬೇಕೆಂದು ಬಯಸುವ ಇಂತಹ ಸಚಿವರು ಇರುವ ತನಕ ಶಾಂತಿ ನೆಲೆಸಲು ಸಾಧ್ಯವೇ ಎಂದು ಸಂಸದರು ಪ್ರಶ್ನಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.