ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರ ರಾಜಕೀಯ ಹಸ್ತಕ್ಷೇಪವೇ ಕಲ್ಲಡ್ಕದ ಕೋಮುಗಲಭೆಗೆ ಹಾಗೂ ಉದ್ವಿಗ್ನ ಪರಿಸ್ಥಿತಿಗೆ ಕಾರಣವಾಗಿರುವುದು ವಾಸ್ತವ ಸಂಗತಿಯಾಗಿದೆ. ಈ ಹಿಂದೆ ನಾನು ಮೊದಲ ಬಾರಿಗೆ ಶಾಸಕನಾಗಿದ್ದಾಗ ಬಂಟ್ವಾಳದಲ್ಲಿ ಡಾ. ಪ್ರಭಾಕರ್ ಭಟ್ರವರನ್ನು ಅಟ್ಟಾಡಿಸಿ ಓಡಿಸಿದ್ದೆ ಎಂಬುವ ಅವರ ಆಕ್ಷೇಪಾರ್ಹ ಹೇಳಿಕೆ ಸಚಿವರ ಕ್ರಿಮಿನಲ್ ಪ್ರವೃತ್ತಿಯನ್ನು ತೋರಿಸುತ್ತದೆ. ಉಸ್ತುವಾರಿ ಸಚಿವರಾಗಿ ಜಿಲ್ಲೆಯ ಸಮಸ್ತ ಸಮುದಾಯವನ್ನು ಸಮಾನ ದೃಷ್ಟಿಯಿಂದ ನೋಡದೆ ಅಲ್ಪಸಂಖ್ಯಾತರನ್ನು ಬಹುಸಂಖ್ಯಾತರ ವಿರುದ್ಧ ಎತ್ತಿ ಕಟ್ಟುವ ಮಾನ್ಯ ಉಸ್ತುವಾರಿ ಸಚಿವರ ಈ ಹುನ್ನಾರ, ಹಾಗೂ ಯಾವುದೇ ದಾಖಲೆಗಳಿಲ್ಲದಿದ್ದರೂ ಡಾಕ್ಟರ್ ಪ್ರಭಾಕರ್ ಭಟ್ರವರನ್ನು ಬಂಧಿಸುವಂತೆ ಹಾಗೂ ಅವರ ವಿರುದ್ಧ ಸೆಕ್ಷನ್ 307 ದಾಖಲಿಸುವಂತೆ ಪೊಲೀಸ್ ಅಧಿಕಾರಿಗೆ ತಾಖೀತು ಮಾಡುವ ಪ್ರವೃತ್ತಿ ಇರುವ ಮಾನ್ಯ ಉಸ್ತುವಾರಿ ಸಚಿವರು ಕರ್ನಾಟಕ ಸರ್ಕಾರದ ಜವಾಬ್ದಾರಿಯುತ ಸ್ಥಾನದಲ್ಲಿರುವುದು ಸೂಕ್ತವಲ್ಲ.
ಪೊಲೀಸ್ ಇಲಾಖೆಯಲ್ಲಿ ನಾಲ್ಕಾರು ಎಫ್.ಐ.ಆರ್. ದಾಖಲುಗೊಂಡಿರುವ ವ್ಯಕ್ತಿಗಳನ್ನು ತನ್ನ ಬಳಿ ಕುಳ್ಳಿರಿಸಿಕೊಂಡು ಜಿಲ್ಲಾ ಪೊಲೀಸ್ ಅಧಿಕಾರಿಗಳನ್ನು ಅವಮಾನಿಸುವುದರೊಂದಿಗೆ ಪೊಲೀಸ್ ಇಲಾಖೆಯ ನೈತಿಕ ಸ್ಥೈರ್ಯವನ್ನು ಕುಂದಿಸುವ ಮೂಲಕ ಪೊಲೀಸ್ ಇಲಾಖೆಯನ್ನು ತನ್ನ ಕಪಿಮುಷ್ಠಿಯೊಳಗೆ ಇಟ್ಟುಕೊಳ್ಳುವ ಗುಂಡಾಗಿರಿ ಪ್ರವೃತ್ತಿಯನ್ನು ರಮಾನಾಥ ರೈಯವರು ತೋರಿದ್ದಾರೆ. ಅವರ ಈ ಪ್ರವೃತ್ತಿಯನ್ನು ಅತ್ಯಂತ ಕಟು ಶಬ್ದಗಳಿಂದ ಖಂಡಿಸುತ್ತೇನೆ.
ಡಾ. ಪ್ರಭಾಕರ್ ಭಟ್ರವರು ಕಳೆದ 5 ದಶಕಗಳಿಂದ ಜಿಲ್ಲೆಯಲ್ಲಿ ಸಮಾಜಸೇವೆ ಹಾಗೂ ಸಂಘಟನೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದು, ಬಹುಸಂಖ್ಯಾತರ ಮೇಲೆ ದೌರ್ಜನ್ಯ ನಡೆದಾಗ ಗಟ್ಟಿ ಧ್ವನಿ ಎತ್ತುವ ಮೂಲಕ ದಿಟ್ಟತನವನ್ನು ತೋರುತ್ತಿದ್ದಾರೆ.
ಮಾನ್ಯ ಉಸ್ತುವಾರಿ ಸಚಿವರು ಅವರ ವಿರುದ್ದ ಹೇಳಿಕೆ ನೀಡುತ್ತಾ, ಪೊಲೀಸ್ ಇಲಾಖೆಯನ್ನು ಬಳಸಿಕೊಂಡು ಡಾ|| ಕಲ್ಲಡ್ಕ ಪ್ರಭಾಕರ ಭಟ್ ರವರನ್ನು ಧಮನಿಸಿ ಅದರ ಮೂಲಕ ಮುಗ್ದ ಅಲ್ಪಸಂಖ್ಯಾತರ ಮತವನ್ನು ಸೆಳೆಯುವ ರಾಜಕೀಯ ಪಿತೂರಿಯನ್ನು ರೂಪಿಸುತ್ತಿದ್ದಾರೆ.
ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆಯನ್ನು ಸ್ಥಾಪಿಸುವ ಕಾಳಜಿ ಮುಖ್ಯಮಂತ್ರಿಗಳಿಗಿದ್ದಲ್ಲಿ ಕೂಡಲೆ ಶ್ರೀ ರಮಾನಾಥ ರೈಯವರಿಂದ ರಾಜೀನಾಮೆ ಪಡೆಯಬೇಕು ಇಲ್ಲವೆ ಸಂಪುಟದಿಂದ ವಜಾ ಮಾಡುವಂತೆ ಆಗ್ರಹಿಸುತ್ತೇನೆ ಎಂದು ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.