ಚಂಡೀಗಢ: ಉತ್ತರಪ್ರದೇಶ ಮತ್ತು ಮಹಾರಾಷ್ಟ್ರದ ಬಳಿಕ ಇದೀಗ ಪಂಜಾಬ್ ರೈತರ ಸಾಲಮನ್ನಾ ಮಾಡಿದ ದೇಶದ 3ನೇ ರಾಜ್ಯವಾಗಿ ಹೊರಹೊಮ್ಮಿದೆ.
ಸಣ್ಣ ಮತ್ತು ಮಧ್ಯಮ ರೈತರ 2 ಲಕ್ಷದವರೆಗಿನ ಎಲ್ಲಾ ಬೆಳೆ ಸಾಲಗಳನ್ನು ಮನ್ನಾ ಮಾಡುವುದಾಗಿ ಪಂಜಾಬ್ ಮುಖ್ಯಮಂತ್ರಿ ಅಮರೇಂದರ್ ಸಿಂಗ್ ಘೋಷಣೆ ಮಾಡಿದ್ದಾರೆ.
ಈ ನಿರ್ಧಾರದಿಂದಾಗಿ 10.25 ಲಕ್ಷ ರೈತರಿಗೆ ಪ್ರಯೋಜನವಾಗಲಿದೆ. ಸುಮಾರು 8.75 ಲಕ್ಷದಷ್ಟು ರೈತರು 5 ಎಕರೆ ಪ್ರದೇಶದಲ್ಲಿ ಕೃಷಿ ಮಾಡಿದವರಾಗಿದ್ದಾರೆ.
ಸಾಲಮನ್ನಾದಿಂದಾಗಿ ಪಂಜಾಬ್ ಸರ್ಕಾರದ ಮೇಲೆ ಬರೋಬ್ಬರಿ 24 ಸಾವಿರ ಕೋಟಿ ರೂಪಾಯಿಗಳ ಹೊರೆ ಬೀಳಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.