ಮಂಗಳೂರು : ರಾಜ್ಯದಲ್ಲಿ ರೈತರ ಸಾಲದ ಸಮಸ್ಯೆಯನ್ನು ಚೆನ್ನಾಗಿ ಅರಿತಿರುವ ಬಿಜೆಪಿ ರೈತರ ಸಾಲ ಮನ್ನಾ ಮಾಡಿ ರಾಜ್ಯದಲ್ಲಿ ನಡೆಯುವ ರೈತರ ಆತ್ಮಹತ್ಯೆಗಳನ್ನು ಶಾಶ್ವತ ಇತಿಶ್ರೀ ಹಾಡಬೇಕೆಂದು ಕಳೆದ ನಾಲ್ಕು ವರ್ಷಗಳಿಂದ ರಾಜ್ಯಾಧ್ಯಕ್ಷರಾದ ಸನ್ಮಾನ್ಯ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಿರಂತರ ಹೋರಾಟಗಳನ್ನು ರಾಜ್ಯ ಸರಕಾರದ ವಿರುದ್ದ ನಡೆಸಿದೆ.
ಇದರ ಮುಂದಿನ ಭಾಗವಾಗಿ ವಿಧಾನಸೌಧದ ಎದುರುಗಡೆ ಅಮರಣಾಂತ ಉಪವಾಸವನ್ನು ಮಾಡುವುದಾಗಿ ರಾಜ್ಯಾಧ್ಯಕ್ಷರು ಘೋಷಿಸಿರುವಾಗ ಈ ಎಲ್ಲಾ ಹೋರಾಟಕ್ಕೆ ಮಣಿದು ರಾಜ್ಯ ಸರಕಾರ ರಾಜ್ಯದ ರೈತರ ಸಾಲದಲ್ಲಿ 50,000 ರೂಪಾಯಿಗಳಷ್ಟು ಮನ್ನಾ ಮಾಡುವ ನಿರ್ಧಾರವನ್ನು ದ.ಕ. ಜಿಲ್ಲಾ ಬಿಜೆಪಿ ಸ್ವಾಗತಿಸುತ್ತದೆ.
ದೇಶದ ಬೇರೆ ಬೇರೆ ರಾಜ್ಯಗಳು ಹೆಚ್ಚಿನ ಪ್ರಮಾಣದಲ್ಲಿ ಸಾಲ ಮನ್ನಾ ಮಾಡಿರುವಾಗ, ಅತ್ಯಂತ ಹೆಚ್ಚು ರೈತರ ಆತ್ಮಹತ್ಯೆಗಳು ನಡೆದ ಈ ರಾಜ್ಯದಲ್ಲಿ ರೈತರ ಸಾಲವನ್ನು ಪೂರ್ತಿಯಾಗಿ ಮನ್ನಾ ಮಾಡುವಂತೆ ಜಿಲ್ಲಾ ಬಿಜೆಪಿ ಆಗ್ರಹಿಸುತ್ತದೆ.
ಈಗಾಗಲೇ ಘೋಷಣೆಯಾದ ಸಾಲ ಮನ್ನಾದ ಮೊತ್ತವನ್ನು ರೈತರ ಖಾತೆಗೆ ವರ್ಗಾಯಿಸಿ ಯೋಜನೆಯನ್ನು ಕೂಡಲೇ ಕಾರ್ಯಗತಗೊಳಿಸಬೇಕೆಂದು ಜಿಲ್ಲಾ ವಕ್ತಾರ ಜಿತೇಂದ್ರ ಎಸ್. ಕೊಟ್ಟಾರಿ ಸರಕಾರವನ್ನು ಆಗ್ರಹಿಸುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.