ಬಂಟ್ವಾಳ:ಎರಡು ವರ್ಷಗಳ ಆಡಳಿತ ಪೂರೈಸಿರುವ ರಾಜ್ಯ ಸರಕಾರದ ಸಾಧನಾ ಸಮಾವೇಶ ರಾಜ್ಯದ ಮಾರಕ ಸಮಾವೇಶ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು.
ಅವರು ಬಿ.ಸಿ.ರೋಡ್ನ ಟ್ರೇಡ್ ಸೆಂಟರ್ನಲ್ಲಿ ಬಿಜೆಪಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಚುನಾವಣಾ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದರು. ಗೋ ಹಂತಕರ ರಕ್ಷಣೆ, ಮರಳು ಮಾಫಿಯಾದಂತಹ ಆರೋಪಿಗಳ ಬೆನ್ನೆಲುಬಾಗಿ ನಿಂತು, 11/9 ಭೂಕಾಯ್ದೆಯಂತೆ ಬಡಜನರಿಗೆ ತೊಂದರೆ ನೀಡುತ್ತಿರುವ ಮೂಲಕ ಗೂಂಡಾ ರಾಜಕಾರಣ ನಡೆಸುತ್ತಿದೆ ಎಂದು ಟೀಕಿಸಿದರು.
ಬಂಟ್ವಾಳ ಕ್ಷೇತ್ರ ಬಿಜೆಪಿ ಅಧ್ಯಕ್ಷ ಜಿ.ಆನಂದ ಅಧ್ಯಕ್ಷತೆ ವಹಿಸಿದ್ದರು. ಪಕ್ಷದ ಪ್ರಮುಖರಾದ ಮಾಜಿ ಸಚಿವ ಬಿ. ನಾಗರಾಜ ಶೆಟ್ಟಿ, ಕೋಟ ಶ್ರೀನಿವಾಸ ಪೂಜಾರಿ, ರಾಜೇಶ್ ನಾಯ್ಕ್ ಉಳಿಪಾಡಿಗುತ್ತು, ಮೋನಪ್ಪ ಭಂಡಾರಿ, ಹಿಂದುಳಿದ ವರ್ಗಗಳ ಆಯೋಗ ಸದಸ್ಯ ಎಂ.ತುಂಗಪ್ಪ ಬಂಗೇರ, ರಾಜ್ಯ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಸುಲೋಚನಾ ಜಿ.ಭಟ್, ಮಾಜಿ ಶಾಸಕ ಕೆ.ಪದ್ಮನಾಭ ಕೊಟ್ಟಾರಿ, ರಾಮದಾಸ ಬಂಟ್ವಾಳ, ಪೃಥ್ವಿರಾಜ್, ಸಂಜೀವ ಮಠಂದೂರು, ದೇವದಾಸ್ ಶೆಟ್ಟಿ, ಯಶವಂತ ದೇರಾಜೆ, ಚೆನ್ನಪ್ಪ ಕೋಟ್ಯಾನ್ ಪಾಲ್ಗೊಂಡಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.