ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರ ನಡೆಯುತ್ತಿರುವ ಕೊಲೆ ಮತ್ತು ಕೊಲೆಯತ್ನ ಪ್ರಕರಣಗಳಲ್ಲಿ ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿ ಮತ್ತು ಅಮಾಯಕ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ದ.ಕ. ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಬೃಹತ್ ಪ್ರತಿಭಟನೆಯನ್ನು ಮಂಗಳೂರಿನ ಪುರಭವನದಲ್ಲಿ ಜುಲೈ 13 ರಂದು ಹಮ್ಮಿಕೊಳ್ಳಲಾಗಿತ್ತು.
ಅಮಾನುಷವಾಗಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಶರತ್ ಮಡಿವಾಳ ಹತ್ಯೆ ಖಂಡಿಸಿ ಮತ್ತು ದ.ಕ.ಜಿಲ್ಲೆಯಲ್ಲಿ ನಡೆಯುತ್ತಿರುವ ಅಮಾಯಕ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ, ಪರಿವಾರ ಸಂಘಟನೆಯ ಪ್ರಮುಖರ ಮೇಲೆ ಕೇಸು ದಾಖಲಿಸಿದ ನಿರ್ಲಜ್ಜ ಸರಕಾರದ ನಡೆಯನ್ನು ಖಂಡಿಸಿ, ಜಲ್ಲೆಯ ಅಶಾಂತಿಗೆ ಕಾರಣಕರ್ತ ವಿದ್ರೋಹಿ ಸಂಘಟನೆಗಳ ವಿರುದ್ಧ ಕ್ರಮ ಜರಗಿಸಬೇಕೆಂದು ಒತ್ತಾಯಿಸಿ ಬೃಹತ್ ಪ್ರತಿಭಟನೆಯನ್ನು ನಡೆಸಲಾಯಿತು.
ಪ್ರತಿಭಟನಾ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಂಸದೆ ಕು. ಶೋಭಾ ಕರಂದ್ಲಾಜೆ, ಸಂಸದ ನಳಿನ್ ಕುಮಾರ್ ಕಟೀಲ್, ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ದ.ಕ. ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು, ಸುಲೋಚನಾ ಭಟ್, ಶಾಸಕ ಅಂಗಾರ, ಕೋಟ ಶ್ರೀನಿವಾಸ್ ಪೂಜಾರಿ ಸೇರಿದಂತೆ ಹಲವು ಗಣ್ಯರು, ಮಹಿಳಾ ಮೋರ್ಚಾ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪ್ರತಿಭಟನಾ ಸಭೆಯಲ್ಲಿ ಪಾಲ್ಗೊಂಡರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.