ಮಂಗಳೂರು : ಸಂಸದ ನಳಿನ್ ಕುಮಾರ್ ಕಟೀಲ್ ಅವರು ಕೇಂದ್ರ ಪ್ರವಾಸೋದ್ಯಮ ಸಚಿವ ಡಾ||ಮಹೇಶ್ ಶರ್ಮಾ ಅವರನ್ನು ಭೇಟಿಯಾಗಿ ಸುಳ್ಯ ತಾಲೂಕು ಬಳ್ಪ ಗ್ರಾಮದ ಸುಮಾರು 1200 ವರ್ಷಗಳಷ್ಟು ಪುರಾತನ ಶ್ರೀ ತ್ರಿಶೂಲಿನಿ ದುರ್ಗಾಪರಮೇಶ್ವರಿ ದೇವಸ್ಥಾನವನ್ನು ಪ್ರವಾಸೋದ್ಯಮದಡಿಯಲ್ಲಿ ಅಭಿವೃದ್ಧಿಗೊಳಿಸಲು ಅನುದಾನವನ್ನು ಮಂಜೂರು ಮಾಡುವಂತೆ ಮನವಿ ಸಲ್ಲಿಸಿದರು.
ಸಂಸದರ ಆದರ್ಶ ಗ್ರಾಮ ಯೋಜನೆಯಡಿಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು ದತ್ತು ತೆಗೆದುಕೊಂಡ ಸುಳ್ಯ ತಾಲೂಕು ಬಳ್ಪ ಗ್ರಾಮದ ಪುರಾತನ ಶ್ರೀ ತ್ರಿಶೂಲಿನಿ ದುರ್ಗಾಪರಮೇಶ್ವರಿ ದೇವಾಲಯವು ಸುಮಾರು 1200 ವರ್ಷಗಳ ಇತಿಹಾಸವನ್ನು ಹೊಂದಿದ್ದು, ದಕ್ಷಿಣ ಕನ್ನಡದ ಹಂಪಿ ಎಂಬ ಖ್ಯಾತಿಯನ್ನು ಪಡೆದಿದೆ. ಈ ದೇವಸ್ಥಾನವನ್ನು ಅಭಿವೃದ್ಧಿಪಡಿಸಲು ಅನುದಾನವನ್ನು ಮಂಜೂರು ಮಾಡುವಂತೆ ಪ್ರವಾಸೋದ್ಯಮ ಸಚಿವರಿಗೆ ಸಂಸದ ನಳಿನ್ ಕುಮಾರ್ ಕಟೀಲ್ ಮನವಿಯನ್ನು ಸಲ್ಲಿಸಿದರು. ಈ ಸಂದರ್ಭ ಶಾಸಕರು, ಕಾರ್ಕಳ ವಿಧಾನಸಭಾ ಕ್ಷೇತ್ರ ಮತ್ತು ವಿರೋಧ ಪಕ್ಷದ ಮುಖ್ಯ ಸಚೇತಕರಾದ ಸುನಿಲ್ ಕುಮಾರ್ ಕಾರ್ಕಳ ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.