ನವದೆಹಲಿ: ದೆಹಲಿಯ ಎಎಪಿ ಸರ್ಕಾರದ ವರ್ತನೆಯಿಂದ ಕಂಗಾಲಾಗಿರುವ ಅಧಿಕಾರಿಗಳು ಬೇರೆಡೆಗೆ ವರ್ಗಾವಣೆ ಬಯಸುತ್ತಿದ್ದಾರೆ ಎಂದು ಹೇಳಲಾಗಿದೆ.
ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಅಧೀನದಲ್ಲಿ ಕಾರ್ಯನಿರ್ವಹಿಸಲು ನಮಗೆ ಇಷ್ಟವಿಲ್ಲ ಎಂದು ದೆಹಲಿ ಸರ್ಕಾರದಲ್ಲಿನ ಕೆಲ ಅಧಿಕಾರಿಗಳು ಕೇಂದ್ರ ಗೃಹ ಸಚಿವಾಲಯಕ್ಕೆ ತಿಳಿಸಿದ್ದಾರೆ ಎನ್ನಲಾಗಿದೆ.
ಕೇಜ್ರಿವಾಲ್ ವಿರುದ್ಧ ಪ್ರತಿಭಟನೆ ನಡೆಸಿದರೆ ತಮ್ಮ ಮೇಲೆ ದೌರ್ಜನ್ಯ ಎಸಗಬಹುದು ಎಂಬ ಭೀತಿಯೂ ಅಧಿಕಾರಿಗಳಲ್ಲಿ ಇದೆ ಎನ್ನಲಾಗಿದೆ.
ಅಲ್ಲದೇ ಹಲವಾರು ಮಂದಿ ದೆಹಲಿಯಿಂದ ಬೇರೆಡೆಗೆ ವರ್ಗಾವಣೆಗೊಳ್ಳಲು ಇಚ್ಛಿಸುತ್ತಿದ್ದಾರೆ ಎಂದು ಹೇಳಲಾಗಿದೆ.
ಪ್ರಸ್ತುತ ಮುಖ್ಯ ಕಾರ್ಯದರ್ಶಿಯ ನೇಮಕ ವಿಚಾರದಲ್ಲಿ ಲೆಫ್ಟಿನೆಂಟ್ ಗವರ್ನರ್ ಅವರೊಂದಿಗೆ ಕೇಜ್ರಿವಾಲ್ ಅವರು ಕಿತ್ತಾಟ ನಡೆಸುತ್ತಿದ್ದಾರೆ. ಈ ವಿಚಾರ ಇತರ ಅಧಿಕಾರಿಗಳಲ್ಲಿ ಭಯ ಮೂಡಿಸಿದೆ ಎಂದು ಹೇಳಲಾಗುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.