ನವದೆಹಲಿ: ಪಾಕಿಸ್ಥಾನ ಜಮ್ಮು ಕಾಶ್ಮೀರದೊಳಗೆ ಉಗ್ರರನ್ನು ನುಸುಳಿಸುವ ಪ್ರಯತ್ನವನ್ನು ಮತ್ತಷ್ಟು ಹೆಚ್ಚಿಸಿದೆ. ಆದರೆ ಇದರಿಂದ ಹೆಚ್ಚಿನ ಪ್ರಮಾಣದ ಹಾನಿಗಳು ಅವರಿಗೇ ಆಗುತ್ತಿದೆ ಎಂದು ರಕ್ಷಣಾ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.
ಲೋಕಸಭೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಗಡಿಯಲ್ಲಿ ಪಾಕಿಸ್ಥಾನಕ್ಕಿಂತ ಹೆಚ್ಚಿನ ಪ್ರಾಬಲ್ಯ ಮತ್ತು ಪ್ರಭಾವವನ್ನು ಭಾರತೀಯ ಸೇನೆಯೇ ಹೊಂದಿದೆ. ಒಳನುಸುಳಿವಿಕೆ ತಡೆಯಲು ಎಲ್ಲಾ ಕ್ರಮಗಳನ್ನೂ ಕೈಗೊಂಡಿದೆ ಎಂದಿದ್ದಾರೆ.
ಭದ್ರತಾ ಪಡೆಗಳು ಕಣ್ಗಾವಲನ್ನು ಹೆಚ್ಚಿಸಿರುವುದರಿಂದ ಹಲವಾರು ಒಳನುಸುಳುವಿಕೆಗಳು ಕುಗ್ಗಿವೆ. ಮಾತ್ರವಲ್ಲ ಒಳನುಸುಳುವಿಕೆ ಸಂಖ್ಯೆಯೂ ಕಡಿಮೆಯಾಗಿದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.