ಮುಂಬೈ: ಕಾಲೇಜುಗಳ ಸಂಸ್ಥಾಪಕ, ಉತ್ಸಾಹಿ ಶಿಕ್ಷಣತಜ್ಞ, ಆಧ್ಯಾತ್ಮದ ಮಾರ್ಗದರ್ಶಿ ಶ್ರೀ ನಿರಂಜನ ಸ್ವಾಮೀಜಿಯವರು ಇಹಲೋಕ ತ್ಯಜಿಸಿದ್ದಾರೆ. 84 ವರ್ಷದ ಸ್ವಾಮಿಯವರಿಗೆ ಹೃದಯಾಘಾತ ಸಂಭವಿಸಿದ್ದು, ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ಕೊಂಡ್ಯೊಯಲಾಯಿತು. ಅಲ್ಲೇ ಅವರು ಕೊನೆ ಉಸಿರೆಳೆದರು. ಅವರು ಇಬ್ಬರು ಪುತ್ರರನ್ನು ಅಗಲಿದ್ದಾರೆ
ಆಧ್ಯಾತ್ಮಿಕ ಚಿಂತಕರಾಗಿ ನಿರಂಜನ ಸ್ವಾಮಿಯವರು ಹಲವು ಶೈಕ್ಷಣಿಕ ಸಂಸ್ಥೆಗಳ ಮೂಲಕ ಪ್ರಥಮ ದರ್ಜೆ ಕಾಲೇಜು ಮತ್ತು ಪಾಲಿಟೆಕ್ನಿಕ್ ಕಾಲೇಜುಗಳನ್ನು ಸ್ಥಾಪಿಸಿ, ಗ್ರಾಮೀಣ ಪ್ರದೇಶದ ಮಕ್ಕಳಿಗೆ ಶಿಕ್ಷಣ ನೀಡಿದ ಕೀರ್ತಿ ಅವರಿಗೆ ಸಲ್ಲುತ್ತದೆ. ನಿರಂಜನ ಸ್ವಾಮಿ ಅವರು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಬಜ್ಪೆಯಲ್ಲಿ ಶ್ರೀ ಕ್ಷೇತ್ರ ಸುಂಕದಕಟ್ಟೆ ಹಾಗೂ ಮುಂಬೈಯ ಸಾತ್ ರಾಸ್ತಾದಲ್ಲಿ ಅಂಬಿಕಾ ಅನ್ನಪೂರ್ಣೇಶ್ವರೀ ದೇವಸ್ಥಾನವನ್ನು ಸ್ಥಾಪಿಸಿದ್ದರು.
ಇವರಿಗೆ ಮುಂಬೈ ಮತ್ತು ದಕ್ಷಿಣ ಕನ್ನಡದಲ್ಲಿ ಅಪಾರ ಸಂಖ್ಯೆಯ ಭಕ್ತರನ್ನು ಹೊಂದಿದ್ದು 1981ರಲ್ಲಿ ಎನ್.ಎಸ್. ಶಿಕ್ಷಣ ಪ್ರತಿಷ್ಠಾನವನ್ನು ಸ್ಥಾಪಿಸಿ ಸಾಮಾಜಿಕ ಬದಲಾವಣೆಗಳಗೆ ಕಾರಣರಾದವರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.