ನವದೆಹಲಿ: ಎಎಪಿ ಸರ್ಕಾರ ಮತ್ತು ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಅವರ ನಡುವಣ ತಿಕ್ಕಾಟದಲ್ಲಿ ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಿದೆ. ಇದು ಎಎಪಿ ಸರ್ಕಾರಕ್ಕೆ ತೀವ್ರ ಹಿನ್ನಡೆಯನ್ನುಂಟು ಮಾಡಿದೆ.
ಈ ಬಗ್ಗೆ ನೋಟಿಫಿಕೇಶನ್ ಹೊರಡಿಸಿರುವ ಕೇಂದ್ರ ಗೃಹಸಚಿವಾಲಯ ‘ದೆಹಲಿ ಸರ್ಕಾರವನ್ನು ಸಂಪರ್ಕಿಸದೆಯೇ ಅಧಿಕಾರಿಗಳನ್ನು ನೇಮಕ ಮತ್ತು ವರ್ಗಾವಣೆ ಮಾಡುವ ಅಧಿಕಾರ ಲೆಫ್ಟಿನೆಂಟ್ ಗವರ್ನರ್ ಅವರಿಗಿದೆ’ ಎಂದಿದೆ.
ಅಲ್ಲದೇ ಲೆ.ಗವರ್ನರ್ ಅವರಿಗಿರುವ ಅಧಿಕಾರ ಮತ್ತು ಪಾತ್ರದ ಬಗ್ಗೆ ಅದು ವಿವರಿಸಿದ್ದು, ಸೇವೆ, ಸಾರ್ವಜನಿಕ ಸುವ್ಯವಸ್ಥೆ, ಪೊಲೀಸ್ ಮತ್ತು ಭೂಮಿ ಈ ವಿಷಯದಲ್ಲಿ ಅವರಿಗೆ ಸಂಪೂರ್ಣ ನ್ಯಾಯಸಮ್ಮತ ಅಧಿಕಾರವಿದೆ ಎಂದಿದೆ.
ಗೃಹಸಚಿವಾಲಯದ ಈ ಹೇಳಿಕೆಯಿಂದ ನಜೀಬ್ ಜಂಗ್ ಅವರೊಂದಿಗೆ ತಿಕ್ಕಾಟ ನಡೆಸುತ್ತಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ತೀವ್ರ ಹಿನ್ನಡೆಯಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.