ನವದೆಹಲಿ : ಕೆಲವೊಂದು ರಾಜ್ಯಗಳ ವಿಧಾನಸಭಾ ಚುನಾವಣೆಗಳು 2019 ರ ಲೋಕಸಭಾ ಚುನಾವಣೆಯೊಂದಿಗೆ ನಡೆಯುವ ಸಾಧ್ಯತೆ ಇದೆ.
2018 ರ ನವೆಂಬರ್, ಡಿಸೆಂಬರ್ನಲ್ಲಿ ನಿಗದಿಯಾಗಿರುವ ಕೆಲವೊಂದು ರಾಜ್ಯಗಳ ವಿಧಾನಸಭಾ ಚುನಾವಣೆಯನ್ನು 2019 ರ ಸಾರ್ವತ್ರಿಕ ಚುನಾವಣೆಯ ಸಂದರ್ಭದಲ್ಲಿ ನಡೆಸಲು ಸರ್ಕಾರ ಬಯಸಿದೆ ಎನ್ನಲಾಗಿದೆ.
ಈ ಬಗ್ಗೆ ಸರ್ಕಾರದ ಉನ್ನತ ಮಟ್ಟದಲ್ಲಿ ಚರ್ಚೆಗಳು ನಡೆಯುತ್ತಿವೆ ಎನ್ನಲಾಗಿದೆ.
ಚುನಾವಣೆಗಾಗಿ ನಡೆಯುವ ಹಣಕಾಸಿನ ವೆಚ್ಚವನ್ನು ತಗ್ಗಿಸಲು ಮತ್ತು ಚುನಾವಣೆಯನ್ನು ನಿಗದಿತ ಸಂದರ್ಭದೊಳಗೆ ನಡೆಸಲು ಸರ್ಕಾರಕ್ಕೆ ಯಾವುದೇ ತೊಂದರೆಗಳು ಆಗದಂತೆ ನೋಡಲು ಈ ರೀತಿಯ ಚಿಂತನೆಗಳನ್ನು ಸರ್ಕಾರ ನಡೆಸುತ್ತಿದೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.