ಗುವಹಾಟಿ: ಅಸ್ಸಾಂನ ಕೊಕ್ರಜಾರ್ ಜಿಲ್ಲೆಯಲ್ಲಿ ಶನಿವಾರ ಗುವಹಾಟಿ-ಸಿಪ್ಹುಂಗ್ ಎಕ್ಸ್ಪ್ರೆಸ್ ರೈಲಿನ 5 ಬೋಗಿಗಳು ಹಳಿ ತಪ್ಪಿವೆ, ಘಟನೆಯಲ್ಲಿ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ಸೇರಿಸಲಾಗಿದೆ. ಬೆಳಿಗ್ಗೆ 5-15ಕ್ಕೆ ಈ ಘಟನೆ ನಡೆದಿದೆ.
ಉಳಿದಂತೆ ಪ್ರಯಾಣಿಕರಿಗೆ ಚಿಕ್ಕಪುಟ್ಟ ಗಾಯಗಳಾಗಿದ್ದು ಅವರಿಗೆ ಪ್ರಾರ್ಥಮಿಕ ಚಿಕಿತ್ಸೆಯನ್ನು ನೀಡಲಾಗಿದೆ. ಈ ಪ್ರಯಾಣಿಕ ರೈಲು ಸಾಲಾಖಿಯಿಂದ ಬಸುಗಾವ್ಂಗೆ ಪ್ರಯಾಣಿಸುತ್ತಿದ್ದು, ಚಾಂಪಾ ಸೇತುವೆಯಲ್ಲಿ ಈ ಘಟನೆ ಸಂಭವಿಸಿದೆ.
ಮರ ಹಳಿಮೇಲೆ ಬಿದ್ದಿರುವುದೇ ಈ ಅಫಘಾತಕ್ಕೆ ಕಾರಣ ಎಂದು ಅಧಿಕಾರಿಗಳು ಹೇಳಿದ್ದಾರೆ. ರೈಲಿನ ವೇಗ ಕಡಿಮೆ ಇದ್ದ ಕಾರಣ ಹೆಚ್ಚಿನ ಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.