ಬೆಂಗಳೂರು: P. F.I , K.F.D, ಮತ್ತು S.D.F.I ಸಂಘಟನೆಗಳ ನಿಷೇಧ, ಸಚಿವ ರಮಾನಾಥ ರೈ ರಾಜಿನಾಮೆ ಹಾಗೂ ಹಿಂದೂ ಕಾರ್ಯಕರ್ತರ ಹತ್ಯೆ ವಿಚಾರಣೆಯನ್ನು ಸಿಬಿಐ ನೀಡುವುದು – ಈ ಎಲ್ಲಾ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬಿಜೆಪಿ ಯುವ ಮೋರ್ಚಾ ವತಿಯಿಂದ ‘ಮಂಗಳೂರು ಚಲೋ’ ರ್ಯಾಲಿ ಇಂದಿನಿಂದ ಪ್ರಾರಂಭಗೊಂಡು ಸೆಪ್ಟೆಂಬರ್ 7 ರಂದು ಮಂಗಳೂರಿನಲ್ಲಿ ಬೃಹತ್ ಸಮಾವೇಶವನ್ನು ಹಮ್ಮಿಕೊಂಡಿತ್ತು.
ಆದರೆ ಈ ರ್ಯಾಲಿಗೆ ರಾಜ್ಯ ಸರ್ಕಾರವು ತಡೆ ಒಡ್ಡಿದ್ದು ಹಲವು ಮುಖಂಡರು ಸೇರಿದಂತೆ ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬೆಂಗಳೂರು, ಮೈಸೂರು, ಹುಬ್ಬಳ್ಳಿ, ಬೆಳಗಾವಿ, ನೆಲಮಂಗಲ ಸೇರಿದಂತೆ ಹಲವೆಡೆ ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನಾ ನಿರತರಾಗಿದ್ದ ಬಿಜೆಪಿ ಗಣ್ಯರು ಹಾಗೂ ಕಾರ್ಯಕರ್ತರ ಮೇಲೆ ಲಾಠಿ ಪ್ರಹಾರ ಮಾಡಲಾಗಿದ್ದು, ಈ ವೇಳೆ ಕೆಲವರಿಗೆ ಗಾಯಗಳಾಗಿವೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.
ಈಗಾಗಲೆ ಬೈಕ್ ಜಾಥಾ ತೆರಳುವ ಸ್ಥಳಗಳಲ್ಲಿ ಬೈಕ್ ಜಾಥಾಕ್ಕೆ ಅನುಮತಿ ನೀಡದೆ ಆಯಾ ಪ್ರದೇಶಗಳಲ್ಲಿ ತಪಾಸಣೆ ಹಾಗೂ ಕಟ್ಟೆಚ್ಚರ ವಹಿಸಲಾಗಿದೆ. ರಾಜ್ಯ ಸರ್ಕಾರದ ಈ ಕ್ರಮದ ವಿರುದ್ಧ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
ರಕ್ಷಣೆ ಕೊಡಬೇಕಾದ ಸರ್ಕಾರವೇ ನಮ್ಮ ಹೋರಾಟವನ್ನು ಹತ್ತಿಕ್ಕುತ್ತಿದೆ. ನಾವು ಮಂಗಳೂರು ಚಲೋ ಬೈಕ್ ಜಾಥಾ ಮಾಡಿಯೇ ಸಿದ್ಧ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ಮಾಜಿ ಡಿಸಿಎಂ ಆರ್. ಅಶೋಕ್, ಸಂಸದೆ ಶೋಭಾ ಕರಂದ್ಲಾಜೆ, ಸಂಸದ ಪ್ರತಾಪ್ ಸಿಂಹ, ಅರವಿಂದ ಲಿಂಬಾವಳಿ, ಪುಟ್ಟಸ್ವಾಮಿ, ರವಿಕುಮಾರ್, ಸುರೇಶ್ ಕುಮಾರ್ ಸೇರಿದಂತೆ ಹಲವು ಗಣ್ಯರು ಹಾಗೂ ನೂರಾರು ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.