ಬಾಗಲಕೋಟೆ: ತಾಲೂಕಿನ ಬೇರೆ ಬೇರೆ ಗ್ರಾಮಗಳಿಂದ ಬಾಗಲಕೋಟೆ ನಗರಕ್ಕೆ ಸರಿಯಾದ ಬಸ್ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಸರ್ವೇಶ್ವರ ವೃತ್ತದಲ್ಲಿ ಇಂದು ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ರ್ಯಾಲಿ ಮೂಲಕ ಬಸವೇಶ್ವರ ವೃತ್ತಕ್ಕೆ ಆಗಮಿಸಿದ ಪ್ರತಿಭಟನಾಕಾರರು ರಾಜ್ಯ ಸರ್ಕಾರದ ವಿರುದ್ಧ ಮತ್ತು ಕೆಎಸ್ಆರ್ಟಿಸಿ ಅಧಿಕಾರಿಗಳ ವಿರುದ್ದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಸಂಘಟನೆಯ ರಾಜ್ಯ ಕಾರ್ಯದರ್ಶಿ ರಾಜೇಶ ಗುರಾಣಿ ಮಾತನಾಡಿ, ಬಾಗಲಕೋಟೆ ನಗರಕ್ಕೆ ಬೇರೆ ಬೇರೆ ಗ್ರಾಮಗಳಿಂದ ಸಾವಿರಾರು ಸಂಖ್ಯೆಯ ವಿದ್ಯಾರ್ಥಿಗಳು ಆಗಮಿಸುತ್ತಾರೆ ಆದರೆ ಗ್ರಾಮಗಳಿಂದ ಸರಿಯಾದ ಸಮಯಕ್ಕೆ ಬಸ್ ಇಲ್ಲದಿರುವ ಕಾರಣಕ್ಕೆ ಸರಿಯಾದ ವೇಳೆಗೆ ಶಾಲಾ ಕಾಲೇಜುಗಳಿಗೆ ಹಾಜರಾಗುತ್ತಿಲ್ಲ ಎಂದು ಹೇಳಿದರು.
ಕಳೆದ 3-4 ವರ್ಷಗಳಿಂದ ಬಸ್ಗಾಗಿ ಸತತವಾಗಿ ಪ್ರತಿಭಟನೆ ನಡೆಸುತ್ತಿದ್ದರು. ಯಾವುದೇ ಜನಪ್ರತಿನಿಧಿಗಳಾಗಲಿ ಅಥವಾ ಕೆಎಸ್ಆರ್ಟಿಸಿ ಅಧಿಕಾರಿಗಳಾಗಲಿ ಯಾವುದೇ ಕ್ರಮ ಕೈಗೊಂಡಿಲ್ಲ. ಬಾಗಲಕೋಟೆ ನಗರದ ಶಾಲಾ ಕಾಲೇಜುಗಳಿಗೆ ಶೇ. 70ರಷ್ಟು ಜನ ಗ್ರಾಮಿಣ ಭಾಗಗಳಿಂದ ಬರುತ್ತಾರೆ ಪ್ರತಿದಿನ ಬಸ್ಗಾಗಿ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಗ್ರಾಮೀಣ ಪ್ರದೇಶದ ಸಾವಿರಾರು ವಿದ್ಯಾರ್ಥಿಗಳು ನೂರಾರು ಕನಸುಗಳನ್ನು ಹೊತ್ತು ಕಾಲೇಜುಗಳಿಗೆ ಆಗಮಿಸುತ್ತಾರೆ ದಿನಾಲು ತರಗತಿಗಳಿಗೆ ಹಾಜರಾಗದೆ ಅವರಿಗೆ ಅನೇಕ ವಿಷಯಗಳ ಜ್ಞಾನ ಇಲ್ಲದಂತಾಗಿದೆ. ರಾಜ್ಯದಲ್ಲಿ 3-4 ವರ್ಷಗಳಿಂದ ಬರಗಾಲವಿದ್ದು ಕೃಷಿಯಲ್ಲಿಯೂ ಸಹ ನಷ್ಟ ಅನುಭವಿಸಿದ ಪಾಲಕರು ಹೇಗಾದರು ಮಾಡಿ ಫೀಸ್ ಕಟ್ಟಿ ಮಕ್ಕಳನ್ನು ಕಾಲೇಜಿಗೆ ಕಳುಹಿಸುತ್ತಿದ್ದಾರೆ. ಆದರೆ ಬಸ್ ಇಲ್ಲದಿರುವುದರಿಂದ ಸರಿಯಾದ ಸಮಯಕ್ಕೆ ಹಾಜರಾಗದೆ ಪರೀಕ್ಷೆಯ ಸಮಯದಲ್ಲಿ ವಿದ್ಯಾರ್ಥಿಗಳಿಗೆ ತುಂಬಾ ತೊಂದರೆಯಾಗುತ್ತದೆ ಎಂದು ತಿಳಿಸಿದರು.
ವಿದ್ಯಾರ್ಥಿಗಳು ಬಸ್ ಮಾಡಿಸಿದ್ದು ಸರಿಯಾದ ಸಮಯಕ್ಕೆ ಬಸ್ ಬರದ ಹಿನ್ನೆಲೆಯಲ್ಲಿ ಖಾಸಗಿ ವಾಹನಗಳಾದ ಟೆಂಪೊ, ಟಂಟಂನಲ್ಲಿ ಪ್ರಯಾಣಿಸುತ್ತಿದ್ದಾರೆ. ಆದರೆ ಖಾಸಗಿ ವಾಹನಗಳು ಸುರಕ್ಷಿತವಲ್ಲ. ಆದರೂ ವಿದ್ಯಾರ್ಥಿಗಳು ಜೀವದ ಹಂಗು ತೊರೆದು ಇವುಗಳಿಗೆ ಆಗಮಿಸುತ್ತಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಸಂಘಟನೆಯ ವಿಭಾಗ ಕಾರ್ಯದರ್ಶಿ ಪೃಥ್ವಿರಾಜ, ಜಿಲ್ಲಾ ಕಾರ್ಯದರ್ಶಿ ಯುವರಾಜ, ಮುಖಂಡರಾದ ಪ್ರಕಾಶ ಪೂಜಾರಿ, ನಿಲ್ಲಪ್ಪ ಶಿವಕಿಣಿ, ಕುಮಾರಸ್ವಾಮಿ ಸೇರಿದಂತೆ ನೂರಾರು ಜನ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.