ಮಂಗಳೂರು : ಹಿಂದೂ ಕಾರ್ಯಕರ್ತರ ಕಗ್ಗೊಲೆ ಖಂಡಿಸಿ, PFI – KFD – SDPI ಸಂಘಟನೆ ನಿಷೇಧಿಸುವಂತೆ ಬಿಜೆಪಿ ಯುವ ಮೋರ್ಚಾ ವತಿಯಿಂದ ಮಂಗಳೂರಿನಲ್ಲಿ ‘ಮಂಗಳೂರು ಚಲೋ’ ಪ್ರತಿಭಟನಾ ಸಭೆಯು ಮಂಗಳೂರಿನ ಜ್ಯೋತಿ ಸರ್ಕಲ್ನಲ್ಲಿ ನಡೆಯಿತು. ಸಹಸ್ರಾರು ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಪಾಲ್ಗೊಂಡಿದ್ದರು.
ಕೋಮು ಸಂಘರ್ಷ ಉಂಟು ಮಾಡುವ ಹಂತಕರಿಗೆ ರಾಜ್ಯ ಸರ್ಕಾರ ಬೆಂಬಲವಾಗಿ ನಿಂತಿದೆ. ಅಮಾಯಕ ಹಿಂದೂಗಳ ಹತ್ಯೆಯನ್ನು ಮಾಡಿದವರನ್ನು ಬಂಧಿಸಲು ಮುಂದಾಗುತ್ತಿಲ್ಲ, ರಾಜ್ಯದಲ್ಲಿ ಅಘೋಷಿತ ವಾತಾವರಣ ನಿರ್ಮಾಣವಾಗಿದೆ. ಶಾಂತಿಯುತವಾಗಿ ಪ್ರತಿಭಟನೆ ನಡೆಸಲು ಮುಂದಾಗಿದ್ದ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ. ಹೋರಾಟವನ್ನು ಹತ್ತಿಕ್ಕುವ ಕೆಲಸ ಸರ್ಕಾರದಿಂದ ನಡೆಯುತ್ತಿದೆ.
ರಮಾನಾಥ ರೈ ಅವರು ರಾಜೀನಾಮೆ ನೀಡಬೇಕು. ಕರಾವಳಿಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಅವರು ವಿಫಲರಾಗಿದ್ದಾರೆ.
ಯಾರೇ ತಡೆದರೂ ನಾವು ಬೈಕ್ ಜಾಥಾ ಮಾಡದೆ ಇರುವುದಿಲ್ಲ ಎಂದು ಬಿಜೆಪಿ ಮುಖಂಡರು ಹೇಳಿದ್ದಾರೆ.
ಬಿಜೆಪಿ ಮುಖಂಡರು, ಸಾವಿರಾರು ಕಾರ್ಯಕರ್ತರು ಜ್ಯೋತಿ ಸರ್ಕಲ್ ಬಳಿ ನಡೆಯುತ್ತಿರುವ ಸಮಾವೇಶದ ನಂತರ ಡಿಸಿ ಕಚೇರಿಗೆ ಮುತ್ತಿಗೆ ಹಾಕಲು ತೀರ್ಮಾನಿಸಿದ್ದಾರೆ.
ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ. ಎಸ್. ಯಡಿಯೂರಪ್ಪ, ಯುವ ಮೋರ್ಚಾ ಅಧ್ಯಕ್ಷ ಸಂಸದ ಪ್ರತಾಪ್ ಸಿಂಹ, ವಿಪಕ್ಷ ನಾಯಕ ಜಗದೀಶ್ ಶೆಟ್ಟರ್, ಕೆ. ಎಸ್. ಈಶ್ವರಪ್ಪ, ಸಂಸದೆ ಶೋಭಾ ಕರಂದ್ಲಾಜೆ, ಅರವಿಂದ ಲಿಂಬಾವಳಿ, ಆರ್. ಅಶೋಕ್, ಪ್ರಹ್ಲಾದ್ ಜೋಶಿ, ನಳಿನ್ ಕುಮಾರ್ ಕಟೀಲ್, ಸಿ. ಟಿ. ರವಿ, ತೇಜಸ್ವಿನಿ ರಮೇಶ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.