ಮಂಗಳೂರು : ಮಂಗಳೂರು ಚಲೋ ಪ್ರತಿಭಟನೆಯಲ್ಲಿ ಭಾಗವಹಿಸಿದ ಭಾರತೀಯ ಜನತಾ ಪಾರ್ಟಿ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ ಘಟನೆ ಕೂಡ ನಡೆದಿದೆ. ವೆನ್ ಲಾಕ್ ಆಸ್ಪತ್ರೆಯಲ್ಲಿ ದಾಖಲಾಗಿರುವ ಕಾರ್ಯಕರ್ತರನ್ನು ಭೇಟಿಯಾಗಿ ವೇದವ್ಯಾಸ ಕಾಮತ್ ಆರೋಗ್ಯ ವಿಚಾರಿಸಿದರು.
ವೆನ್ ಲಾಕ್ ನಲ್ಲಿ ತಮ್ಮನ್ನು ಭೇಟಿಯಾದ ಸುದ್ದಿಗಾರರೊಡನೆ ಮಾತನಾಡಿದ ಮಂಗಳೂರು ನಗರ ದಕ್ಷಿಣ ಬಿಜೆಪಿ ಅಧ್ಯಕ್ಷ ಡಿ ವೇದವ್ಯಾಸ್ ಕಾಮತ್, ಪೊಲೀಸರು ಲಾಠಿ ಜಾರ್ಜ್ ಮಾಡುವ ಅಗತ್ಯವೇ ಇರಲಿಲ್ಲ. ಪೊಲೀಸರ ಈ ಕೃತ್ಯದಿಂದ ಐದು ಜನ ಕಾರ್ಯಕರ್ತರು ಗಾಯಾಳಾಗಿದ್ದಾರೆ. ಒಬ್ಬರಿಗೆ ಈಗಾಗಲೇ ಸ್ಕ್ಯಾನಿಂಗ್, ಅಲ್ಟ್ರಾ ಸೌಂಡ್, ಇಸಿಜಿ ಸಹಿತ ಎಲ್ಲ ಚಿಕಿತ್ಸೆ ನೀಡಲಾಗಿದೆ. ವೈದ್ಯರು ಒಂದು ದಿನ ಆಸ್ಪತ್ರೆಯಲ್ಲಿ ನಿಗಾ ಘಟಕದಲ್ಲಿರಲು ಸೂಚಿಸಿದ್ದಾರೆ ಎಂದರು.
ಹಾಗೆ ಕಣ್ಣೂರಿನ ಹಾಗೂ ಚಿಕ್ಕಮಗಳೂರಿನ ಕಾರ್ಯಕರ್ತರಿಗೂ ಗಾಯಗಳಾಗಿವೆ. ಅವರು ಹೊರರೋಗಿಗಳಾಗಿ ಚಿಕಿತ್ಸೆ ಪಡೆದುಕೊಂಡು ತೆರಳಿದ್ದಾರೆ. ಪೊಲೀಸರು ಲಾಠಿಚಾರ್ಜ್ ಮಾಡುವ ಅಗತ್ಯ ಇಲ್ಲದಿದ್ದರೂ ಮಾಡಿದ್ದನ್ನು ನಾವು ಖಂಡಿಸುತ್ತೇವೆ. ಹಾಗೆ ನಗರದ ಬೇರೆ ಬೇರೆ ಕಡೆಗಳಲ್ಲಿ ಮಹಿಳಾ ಕಾರ್ಯಕರ್ತರನ್ನು ದಿಗ್ಭಂದನ ಹಾಕಿ ರ್ಯಾಲಿಗೆ ಬರದಂತೆ ತಡೆಯಲಾಗಿದೆ. ಅನೇಕ ಕಡೆ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ತಾವು ಹೋಗಿ ಮಹಿಳಾ ಕಾರ್ಯಕರ್ತರನ್ನು ಬಿಡಿಸಿ ತರಬೇಕಾಯಿತು ಎಂದು ವೇದವ್ಯಾಸ ಕಾಮತ್ ತಿಳಿಸಿದ್ದಾರೆ. ಪೊಲೀಸರು ಉದ್ದೇಶ ಪೂರ್ವಕವಾಗಿ ನಮ್ಮ ಮೇಲೆ ದಾಳಿ ಮಾಡಿದ್ದನ್ನು ನಾವು ವಿರೋಧಿಸಿ ಈ ಕುರಿತು ಮುಂದಿನ ತೀರ್ಮಾನ ಏನು ಕೈಗೊಳ್ಳಬೇಕು ಎಂದು ಹಿರಿಯರೊಂದಿಗೆ ಚರ್ಚಿಸಿ ನಿರ್ಧರಿಸುವುದಾಗಿ ವೇದವ್ಯಾಸ್ ಕಾಮತ್ ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.