ಮಂಗಳೂರು : ತುಳುನಾಡಿನ ಆರಾಧ್ಯ ಪುರುಷರಾದ ಕೋಟಿ ಚೆನ್ನಯರ ತಾಯಿ ದೇಯಿ ಬೈದೆತಿ ಮೂರ್ತಿ ಬಳಿ ವಿಕೃತ ವರ್ತನೆ ತೋರಿ, ಸಾಮಾಜಿಕ ಜಾಲತಾಣದಲ್ಲಿ ಫೋಟೊ ಅಪ್ಲೋಡ್ ಮಾಡಿರುವುದು ಆಘಾತಕಾರಿ ವಿಷಯವಾಗಿದೆ. ಈಗಾಗಲೇ ಪೊಲೀಸರು ಆರೋಪಿಯನ್ನು ಬಂಧಿಸಿರುವುದು ಶ್ಲಾಘನೀಯ. ಹೀನ ಕೃತ್ಯ ಎಸಗಿದ ಮತಾಂಧ ವ್ಯಕ್ತಿಯ ವಿರುದ್ಧ ಕಠಿಣ ಕಾನೂನು ಕ್ರಮಕೈಗೊಳ್ಳಬೇಕೆಂದು ದ.ಕ.ಸಂಸದ ನಳಿನ್ಕುಮಾರ್ ಕಟೀಲ್ ಆಗ್ರಹಿಸಿದ್ದಾರೆ.
ಹಿಂದೂಗಳ ಧಾರ್ಮಿಕ ಭಾವನೆಗೆ ಘಾಸಿ ಉಂಟು ಮಾಡುವ ಘಟನೆ ಕರಾವಳಿಯಲ್ಲಿ ಆಗಾಗ ನಡೆಯುತ್ತಿದೆ. ಪ್ರಗತಿಪರರ ಹೆಸರಿನಲ್ಲಿ ಕೆಲವರು ಇದಕ್ಕೆ ಕುಮ್ಮಕ್ಕು ನೀಡುತ್ತಿರುವ ಕಾರಣ ಮತಾಂಧರು ನಿರಾತಂಕವಾಗಿ ಇಂತಹ ಕೃತ್ಯ ಎಸಗುತ್ತಿದ್ದಾರೆ. ತಾಯಿ ದೇಯಿ ಬೈದೆತಿ ಮೂರ್ತಿ ಬಳಿ ಅನಾಗರಿಹ ವರ್ತನೆ ತೋರಿದ ಕೃತ್ಯವನ್ನು ಆಸ್ತಿಕರು ಸಹಿಸಲು ಸಾಧ್ಯವಿಲ್ಲ. ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವ ಮೂಲಕ ಸಮಾಜದ ಶಾಂತಿ ಕದಡುವ ಇಂತಹ ಕೃತ್ಯ ಮರುಕಳಿಸದಂತೆ ಪೊಲೀಸರು ಎಚ್ಚರ ವಹಿಸಬೇಕೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.