ಪಾಟ್ನಾ: ಬಿಹಾರದ ಗಯಾ ಜಿಲ್ಲೆಯಲ್ಲಿ ಮಾವೋವಾದಿಗಳು 32 ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ಅಲ್ಲದೇ ಸರನ್ ಜಿಲ್ಲೆಯ ಪನಪುರದಲ್ಲಿ ಮೊಬೈಲ್ ಟವರನ್ನು ಸುಟ್ಟು ಹಾಕಿದ್ದಾರೆ.
ಮಾವೋವಾದಿ ಮಹಿಳೆಯೊಬ್ಬಳ ಹತ್ಯೆಯನ್ನು ಖಂಡಿಸಿ ಸೋಮವಾರದಿಂದ ಎರಡು ದಿನಗಳ ಕಾಲ ಬಂದ್ಗೆ ಕರೆ ನೀಡದ ಮಾವೊವಾದಿಗಳು, ವಾಹನಗಳನ್ನು ಬಲವಂತವಾಗಿ ತಡೆಹಿಡಿದಿದ್ದಾರೆ, ಭಾನುವಾರ ಮಧ್ಯರಾತ್ರಿಯೇ ಹಲವು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ.
ನಮ್ಮನ್ನು ಕೆಳಗಿಳಿಯುವಂತೆ ಸೂಚನೆ ನೀಡಿ ಬಳಿಕ ನಮ್ಮ ವಾಹನಗಳಿಗೆ ಬೆಂಕಿ ಹಚ್ಚಿದರು ಎಂದು ಚಾಲಕರು ಪೊಲೀಸರ ಮುಂದೆ ಹೇಳಿಕೊಂಡಿದ್ದಾರೆ.
ಮಹಿಳೆಯ ಹತ್ಯೆ ಮತ್ತು ತಮ್ಮ ವಿರುದ್ಧ ಸೈನಿಕ ಕಾರ್ಯಾಚರಣೆಯನ್ನು ನಿಲ್ಲಿಸುವಂತೆ ಆಗ್ರಹಿಸಿ ಮಾವೋವಾದಿಗಳು ಬಂದ್ಗೆ ಕರೆ ನೀಡಿದ್ದಾರೆ.
ಗಯಾದಲ್ಲಿ ಹೆಚ್ಚುವರಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದ್ದು, ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.