ನವದೆಹಲಿ: ತನ್ನ ಸರ್ಕಾರ ಒಂದು ವರ್ಷ ಪೂರೈಸಿದ ಸಂದರ್ಭದಲ್ಲಿ ಮಂಗಳವಾರ ನವದೆಹಲಿಯ ವಿಜ್ಞಾನ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ‘ಕಿಸಾನ್ ಟಿವಿ’ಯನ್ನು ಉದ್ಘಾಟಿಸಿದರು.
ಈ ವೇಳೆ ಮಾತನಾಡಿದ ಅವರು ‘ದೇಶದಲ್ಲಿನ ರೈತರ ಸ್ಥಿತಿಗತಿಯನ್ನು ಸುಧಾರಿಸುವ ಅಗತ್ಯವಿದೆ. ದೇಶ ಪ್ರಗತಿ ಹೊಂದಬೇಕಾದರೆ ಮೊದಲು ಹಳ್ಳಿಗಳ ಮತ್ತು ರೈತರ ಉದ್ಧಾರ ಮಾಡಬೇಕಿದೆ’ ಎಂದರು.
ಕಿಸಾನ್ ಟಿವಿ ರೈತರಿಗಾಗಿ ಇರುವ 24×7 ಚಾನೆಲ್ ಆಗಿದ್ದು, ಕೃಷಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಳನ್ನು ನೀಡಲಿದೆ.
ಅಧಿಕಾರಕ್ಕೆ ಬಂದ ತಕ್ಷಣವೇ ಕಿಸಾನ್ ಟಿವಿ ಆರಂಭಿಸುವುದಾಗಿ ಎನ್ಡಿಎ ಹೇಳಿಕೊಂಡಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.