ಬೆಂಗಳೂರು : ಕಾರ್ಮಿಕ ಇಲಾಖೆಯೊಂದಿಗೆ 108 ಆಂಬ್ಯುಲೆನ್ಸ್ ನೌಕರರು ನಡೆಸಿದ ಮಾತುಕತೆ ಮುರಿದುಬಿದ್ದಿದೆ, ಈ ಹಿನ್ನಲೆಯಲ್ಲಿ ನೌಕರರು ವಿವಿಧ ಬೇಡಿಗಳ ಈಡೇರಿಕೆಗೆ ಒತ್ತಾಯಿಸಿ ಮತ್ತೆ ಮುಷ್ಕರ ಕೈಗೊಳ್ಳುವ ಸಾಧ್ಯತೆಯಿದೆ.
ಮಂಗಳವಾರ ಕಾರ್ಮಿಕ ಇಲಾಖೆಯ ಜಂಟಿ ಆಯುಕ್ತ ನರಸಿಂಹಮೂರ್ತಿ ಅವರು ನಡೆಸಿದ ಸಭೆಯಲ್ಲಿ ತಮ್ಮ ಬೇಡಿಕೆಗೆ ಸೂಕ್ತ ಪ್ರತಿಕ್ರಿಯೆ ಸಿಗದ ಕಾರಣ ಮುಷ್ಕರದ ತೀರ್ಮಾನ ಕೈಗೊಳ್ಳಲಾಗಿದೆ ಎಂದು ನೌಕರರ ಸಂಘ ಹೇಳಿದೆ.
ಕಳೆದ ವರ್ಷ ಡಿಸೆಂಬರ್ ತಿಂಗಳಲ್ಲಿ ಕನಿಷ್ಠ ವೇತನ ನಿಗ, ಸೇವಾ ಭದ್ರತೆ ಒದಗಿಸುವಂತೆ ಸಲಹೆ ನೀಡಿದ್ದರು. ಅದು ಇನ್ನೂ ಕಾರ್ಯರೂಪ ಗೊಂಡಿಲ್ಲ ಅದಕ್ಕಾಗಿ ಹೋರಾಟ ನಡೆಸಿದರೆ ಅದನ್ನು ಈಡೇರಿಸುವ ಭರವಸೆ ನೀಡಿ ನುಣುಚಿಕೋಳ್ಳುತ್ತಾರೆ.
ಇಲಾಖೆ ಬಾಕಿ ಇರುವ ಎರಡು ತಿಂಗಳ ವೇತನವನ್ನು ಮೇ ೩೦ರೊಳಗೆ ಪಾವತಿಸುವುದಾಗಿ ಭರವಸೆ ನೀಡಿದೆ. ಆದರೆ, ವೇತನ ಹೆಚ್ಚಳ, ಸೇವಾ ಭದ್ರತೆ, ಮುಂತಾದ ಬೇಡಿಕೆಗಳನ್ನು ಈಡೇರದ ಕಾರಣ ಮುಷ್ಕರ ಮಾಡುವುದು ಅನಿವಾರ್ಯ ಎಂದು ಹೇಳಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.