ನವದೆಹಲಿ: ಭಾರತದೊಂದಿಗಿನ ದ್ವಿಪಕ್ಷೀಯ ಸಂಬಂಧವನ್ನು ವೃದ್ಧಿಗೊಳಿಸುವ ಸಲುವಾಗಿ ಅಫ್ಘಾನಿಸ್ತಾನ ಅಧ್ಯಕ್ಷ ಅಶ್ರಫ್ ಘನಿ ಮಂಗಳವಾರ ಭಾರತಕ್ಕೆ ಆಗಮಿಸಿದ್ದಾರೆ. ಪ್ರಧಾನಿ ಮತ್ತು ರಾಷ್ಟ್ರಪತಿಗಳೊಂದಿಗೆ ಅವರು ಮಾತುಕತೆ ನಡೆಸಲಿದ್ದಾರೆ.
ಮೋದಿಯೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ ಬಳಿಕ ಅವರು, ವಿವೇಕಾನಂದ ಇಂಟರ್ನ್ಯಾಷನಲ್ ಫೌಂಡೇಶನ್ನಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಮತ್ತು ಸುಷ್ಮಾ ಸ್ವರಾಜ್ ಅವರನ್ನೂ ಭೇಟಿಯಾಗಲಿದ್ದಾರೆ.
ವ್ಯಾಪಾರ, ಭದ್ರತೆ ಮತ್ತು ಪ್ರಾದೇಶಿಕ ವಿಷಯಗಳಿಗೆ ಘನಿ ಅವರು ಹೆಚ್ಚಿನ ಒತ್ತು ನೀಡಲಿದ್ದಾರೆ ಎಂದು ಅಫ್ಘಾನ್ ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.