ನವದೆಹಲಿ: ಬರೋಬ್ಬರಿ 7 ಲಕ್ಷ ಕೋಟಿ ರೂಪಾಯಿ ಮೊತ್ತ ರಾಷ್ಟ್ರೀಯ ಹೆದ್ದಾರಿ ಯೋಜನೆಗೆ ಕೇಂದ್ರ ಸಂಪುಟ ಮಂಗಳವಾರ ಅನುಮೋದನೆಯನ್ನು ನೀಡಿದೆ.
ಈ ಯೋಜನೆಯಡಿ 83 ಸಾವಿರ ಕಿಲೋಮೀಟರ್ ಹೆದ್ದಾರಿ ವಿಸ್ತರಣೆ ಮತ್ತು ಅಭಿವೃದ್ಧಿಗೊಳ್ಳಲಿದೆ. 2022ರ ವೇಳೆಗೆ 7 ಲಕ್ಷ ಕೋಟಿ ಮೊತ್ತದ ಈ ಅಭಿವೃದ್ಧಿ ಯೋಜನೆ ಸಂಪೂರ್ಣಗೊಳ್ಳುವ ನಿರೀಕ್ಷೆ ಇದೆ.
ದೇಶದ ಗಡಿ ಭಾಗಗಳನ್ನು ಸಂಪರ್ಕಿಸುವ 28,400 ಕಿಮೀ ಭಾರತ್ ಮಾಲಾ ಹೆದ್ದಾರಿ ಯೋಜನೆಯೂ ಇದರಲ್ಲಿ ಒಳಗೊಂಡಿದೆ.
ಈ ಯೋಜನೆಯಿಂದಾಗಿ ಆರ್ಥಿಕ ಚಟುವಟಿಕೆಯೂ ಗರಿಗೆದರಲಿದೆ ಮತ್ತು ಅಪಾರ ಸಂಖ್ಯೆಯಲ್ಲಿ ಉದ್ಯೋಗವಕಾಶಗಳೂ ದೊರಕಲಿವೆ ಎಂಬ ನಿರೀಕ್ಷೆ ಇದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.