ಲಕ್ನೋ: ವೃಂದಾವನ ಮತ್ತು ಬರ್ಸಾನಾಗಳನ್ನು ಉತ್ತರಪ್ರದೇಶದ ಸರ್ಕಾರ ‘ಪವಿತ್ರ ತೀರ್ಥಸ್ಥಳ’ ಎಂದು ಘೋಷಿಸಿದ್ದು, ಅಲ್ಲಿನ ಆವರಣದಲ್ಲಿ ಮಾಂಸ ಮತ್ತು ಮದ್ಯವನ್ನು ಸಂಪೂರ್ಣ ನಿಷೇಧ ಮಾಡಿದೆ.
‘ಮಥುರಾದಲ್ಲಿನ ವೃಂದಾವನ ಶ್ರೀಕೃಷ್ಣ ಮತ್ತು ಆತನ ಸಹೋದರ ಬಲರಾಮನ ಜನ್ಮಸ್ಥಳ, ಇದು ವಿಶ್ವ ಪ್ರಸಿದ್ಧ ತೀರ್ಥ ಕ್ಷೇತ್ರವೂ ಹೌದು. ಬರ್ಸಾನಾ ರಾಧೆಯ ಜನ್ಮಸ್ಥಳವಾಗಿದೆ. ದೇವರ ದರ್ಶನ ಪಡೆಯಲು ಪ್ರತಿನಿತ್ಯ ಅಪಾರ ಸಂಖ್ಯೆಯ ಜನರು ಇಲ್ಲಿಗೆ ಆಗಮಿಸುತ್ತಾರೆ. ಅವರ ಅಗತ್ಯತೆ ಮತ್ತು ಪ್ರವಾಸೋದ್ಯಮವನ್ನು ಗಮನದಲ್ಲಿಟ್ಟುಕೊಂಡು ಇವುಗಳನ್ನು ಪವಿತ್ರ ಸ್ಥಳಗಳೆಂದು ಘೋಷಿಸಲಾಗಿದೆ’ ಎಂದು ಸರ್ಕಾರ ಅಧಿಕೃತ ಪ್ರಕಟನೆಯಲ್ಲಿ ತಿಳಿಸಿದೆ.
ಮೊಟ್ಟೆ, ಮಾಂಸ, ಮದ್ಯ ಸೇವನೆ ಮತ್ತು ಮಾರಾಟವನ್ನು ಇವುಗಳ ಆವರಣದಲ್ಲಿ ನಿಷೇಧಿಸಲಾಗಿದೆ.
ಈ ಸ್ಥಳಗಳ ಪಾವಿತ್ರ್ಯತೆಯನ್ನು ಗಮನಿಸಿ ಇಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳುವುದಾಗಿ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.