ನವದೆಹಲಿ: ದೋಷಯುಕ್ತ ಸರ್ಕಾರಿ ಯಂತ್ರವನ್ನು ಸರಿ ದಾರಿಗೆ ತರುವುದಕ್ಕಾಗಿ ನಾವು ಜನಪ್ರಿಯ ಕಾರ್ಯಗಳನ್ನು ಬಿಟ್ಟು ನಾವು ಅತಿ ಕಠಿಣ ಮಾರ್ಗವನ್ನು ಆಯ್ಕೆ ಮಾಡಿಕೊಂಡಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಸರ್ಕಾರಕ್ಕೆ ಒಂದು ವರ್ಷ ಪೂರೈಸಿದ ಹಿನ್ನಲೆಯಲ್ಲಿ ಅವರು ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾಗೆ ಸಂದರ್ಶನ ನೀಡಿದರು.
ಒಂದು ವೇಳೆ ನಾನು ಜನಪ್ರಿಯತೆಗಾಗಿಯೇ ಕಾರ್ಯಗಳನ್ನು ಮಾಡುವ ಹಾದಿಯನ್ನು ಆಯ್ಕೆ ಮಾಡಿಕೊಂಡಿದ್ದರೆ ಜನರು ನನ್ನ ಮೇಲಿಟ್ಟಿದ್ದ ನಂಬಿಕೆ ಮುರಿದು ಬೀಳುತ್ತಿತ್ತು ಎಂದಿದ್ದಾರೆ.
ಸರ್ಕಾರಿ ಅಧಿಕಾರಿಗಳಿಗೆ ಅವರು ಜನರ ಸೇವಕರು ಎಂಬುದನ್ನು ಮನವರಿಕೆ ಮಾಡಿಕೊಡುತ್ತಿದ್ದೇವೆ, ಕೇಂದ್ರ ಸರ್ಕಾರಿ ಅಧಿಕಾರಿಗಳಲ್ಲು ಶಿಸ್ತು ಮೂಡಿಸುವ ಕಾರ್ಯವನ್ನು ಮಾಡಿದ್ದೇವೆ.
ಅಧಿಕಾರಿಗಳೊಂದಿಗೆ ನಿರಂತರವಾಗಿ ಸಮಾಲೋಚನೆ ನಡೆಸುತ್ತಿರುತ್ತೇನೆ, ಇದು ನನ್ನ ಕಾರ್ಯಶೈಲಿಯ ಒಂದು ಭಾಗ. ಎಲ್ಲರೂ ಒಂದು ತಂಡವಾಗಿ ಕಾರ್ಯನಿರ್ವಹಿಸಿದರೆ ಮಾತ್ರ ದೇಶದ ಪ್ರಗತಿ ಸಾಧ್ಯ.
ಪ್ರಧಾನಿ ಮತ್ತು ಮುಖ್ಯಮಂತ್ರಿಗಳು ಒಂದು ತಂಡ, ಕೇಂದ್ರ ಸಚಿವರು ಮತ್ತು ರಾಜ್ಯ ಸಚಿವರು ಒಂದು ತಂಡ, ಕೇಂದ್ರ ಮತ್ತು ರಾಜ್ಯದ ನಾಗರಿಕ ಸೇವಾ ಅಧಿಕಾರಿಗಳು ಒಂದು ತಂಡವಾಗಿ ಕಾರ್ಯನಿರ್ವಹಿಸುವುದು ಅಗತ್ಯ. ಇದರಿಂದ ಮಾತ್ರ ದೇಶವನ್ನು ಯಶಸ್ವಿಯಾಗಿ ಅಭಿವೃದ್ಧಿ ಪಥದತ್ತ ಕೊಂಡೊಯ್ಯಲು ಸಾಧ್ಯ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.