ದೆಹಲಿ: ಜೂನ್ 6ರಂದು ಬಾಂಗ್ಲಾದೇಶ ಪ್ರವಾಸ ಕೈಗೊಳ್ಳಲಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಸಾಥ್ ನೀಡಲಿದ್ದಾರೆ.
ಈ ವಿಷಯವನ್ನು ಪಶ್ಚಿಮಬಂಗಾಳ ಸಚಿವ ಪಾರ್ಥ ಚ್ಯಾಟರ್ಜಿಯವರು ಸ್ಪಷ್ಟಪಡಿಸಿದ್ದಾರೆ.
ಪ್ರಧಾನಿಯೊಂದಿಗೆ ಸಿಎಂ ಮಮತಾ ಅವರು ಬಾಂಗ್ಲಾಗೆ ತೆರಳಲಿದ್ದಾರೆ. ಈ ಭೇಟಿ ಎರಡು ಬಂಗಾಳಗಳ ಮತ್ತು ಎರಡು ದೇಶಗಳ ನಡುವಣ ಬಾಂಧವ್ಯವನ್ನು ಗಟ್ಟಿಗೊಳಿಸುತ್ತದೆ ಎಂಬ ವಿಶ್ವಾಸವಿದೆ ಎಂದು ಚ್ಯಾಟರ್ಜಿ ಹೇಳಿದ್ದಾರೆ.
ಬಾಂಗ್ಲಾ ಪ್ರಧಾನಿ ಶೇಖ್ ಹಸೀನ ಅವರ ಆಹ್ವಾನ ಮೇರೆಗೆ ಮೋದಿ ಅಲ್ಲಿಗೆ ಭೇಟಿ ನೀಡುತ್ತಿದ್ದಾರೆ. ಹಸೀನಾ ಸರ್ಕಾರ ಬಾಂಗ್ಲಾದಲ್ಲಿ ಆಡಳಿತಕ್ಕೆ ಬಂದ ಮೇಲೆ ಉಭಯ ದೇಶಗಳ ಬಾಂಧವ್ಯ ಗಟ್ಟಿಗೊಳ್ಳುತ್ತಾ ಬಂದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.